Advertisement

ಭದ್ರಾ ನೀರಿಗಾಗಿ ಉಪವಾಸ ಸತ್ಯಾಗ್ರಹ

11:40 AM Jul 04, 2019 | Naveen |

ಹಿರಿಯೂರು: ವಿವಿ ಸಾಗರಕ್ಕೆ ಭದ್ರಾ ನೀರು ಹರಿಸುವಂತೆ ಒತ್ತಾಯಿಸಿ ವಿವಿ ಸಾಗರ ಹೋರಾಟ ಸಮಿತಿ ನೇತೃತ್ವದಲ್ಲಿ ಆರಂಭವಾಗಿರುವ ಹೋರಾಟಕ್ಕೆ ಬುಧವಾರ ತಾಲೂಕಿನ ಹಲವಾರು ಸಂಘ-ಸಂಸ್ಥೆಗಳು, ವಿದ್ಯಾರ್ಥಿ ಸಂಘಟನೆಗಳು ಕೈಜೋಡಿಸಿವೆ.

Advertisement

ಬುಧವಾರ ತಾಲೂಕು ವಕೀಲರ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ಅವರ ಭರವಸೆ ಮೇರೆಗೆ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.

ನ್ಯಾಯವಾದಿ ಟಿ. ಸಂಜಯ್‌ ಮಾತನಾಡಿ, ಏನೇ ಆದರೂ ವಿವಿ ಸಾಗರಕ್ಕೆ ಭದ್ರಾ ನೀರು ಹರಿಯಬೇಕು ಅಲ್ಲಿಯವರೆಗೂ ಹೋರಾಟ ಮುಂದುವರೆಸಲಾಗುವುದು. ತಾಲೂಕಿನಲ್ಲಿ ತೀವ್ರ ಬರಗಾಲ ಆವರಿಸಿದೆ . ಈಗಾಗಲೇ ತೆಂಗು, ಅಡಿಕೆ ಸೇರಿದಂತೆ ಎಲ್ಲಾ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ಪರಿತಪಿಸುವಂತಾಗಿದೆ. ಆದ್ದರಿಂದ ಭದ್ರಾ ಯೋಜನೆ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ತುರ್ತಾಗಿ ವಿವಿ ಸಾಗರ ಜಲಾಶಯಕ್ಕೆ ನೀರು ಹರಿಸಬೇಕು. ಅದಕ್ಕಾಗಿ ವಕೀಲರು ಕೂಡ ರೈತರ ಹೋರಾಟಕ್ಕೆ ಕೈಜೋಡಿಸಿದ್ದೇವೆ ಎಂದು ಹೇಳಿದರು.

ಉಪವಾಸ ಸತ್ಯಾಗ್ರಹದಲ್ಲಿ ನಗರಸಭಾ ಸದಸ್ಯ ಹಾಗೂ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಪಾಂಡುರಂಗ, ಜೆಡಿಎಸ್‌ ತಾಲೂಕು ಯುವ ಘಟಕದ ಅಧ್ಯಕ್ಷ ಸೈಯ್ಯದ್‌ ಸಲಾವುದ್ದೀನ್‌, ಕರವೇ ಅಧ್ಯಕ್ಷ ಕೃಷ್ಣಮೂರ್ತಿ ಪೂಜಾರ್‌, ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಪಿ.ಎಸ್‌. ಸಾದತ್‌ವುಲ್ಲಾ, ಸ್ನೇಹ ಸಂಪದ ಸಂಸ್ಥೆ ಅಧ್ಯಕ್ಷ ಅಬ್ದುಲ್ ಸಲ್ಮಾನ್‌, ಅಬೀದ್‌ ಹುಸೇನ್‌, ವಕೀಲರಾದ ಅನಿಲ್ಕುಮಾರ್‌, ಚಂದ್ರಶೇಖರ್‌, ವಿಜಯಾನಂದ್‌, ಮಹಿಳಾ ಸಂಘಟನೆಗಳ ಕವಿತಾ

ಶ್ರೀನಿವಾಸ್‌, ಲಕ್ಷ್ಮೀ ರಾಜೇಂದ್ರನ್‌, ವಸಂತಿ ಲಕ್ಷ್ಮಣ್‌, ಕುಮುದಾ ಪೆರಿಸ್ವಾಮಿ, ಸೆಲ್ವಮ್ಮ ಮತ್ತಿತರರು ಭಾಗವಹಿಸಿದ್ದರು. ಕೃಷಿಕ ಸಮಾಜ, ರಾಜ್ಯ ರೈತ ಸಂಘ, ಭಾರತೀಯ ಕಿಸಾನ್‌ ಸಂಘ, ಕನ್ನಡ ಸಾಹಿತ್ಯ ಪರಿಷತ್‌, ವಕೀಲರ ಸಂಘ, ಹಿರಿಯೂರು ಗೌಂಡರ್‌ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮೊದಲಾದ ಸಂಘಟನೆಗಳೂ ಬೆಂಬಲ ವ್ಯಕ್ತಪಡಿಸಿವೆ.

Advertisement

ಸತ್ಯಾಗ್ರಹ ಸ್ಥಳಕ್ಕೆ ಮಾಜಿ ಸಚಿವ ಡಿ. ಸುಧಾಕರ್‌, ಜೆಡಿಎಸ್‌ ಜಿಲ್ಲಾಧ್ಯಕ್ಷರಾದ ಡಿ. ಯಶೋಧರ, ತಾಪಂ ಅಧ್ಯಕ್ಷ ಎಸ್‌. ಚಂದ್ರಪ್ಪ, ನಗರಸಭೆ ಸದಸ್ಯ ಅಜಯ್‌ಕುಮಾರ್‌, ಖಾದಿ ರಮೇಶ್‌ ಮತ್ತಿತರರು ಭೇಟಿ ನೀಡಿ ಬೆಂಬಲ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next