Advertisement

ನೀರಿನ ಮಿತ ಬಳಕೆಗೆ ಒತ್ತು ಕೊಡಿ

12:35 PM Sep 04, 2019 | Naveen |

ಹಿರಿಯೂರು: ಸಾರ್ವಜನಿಕರು ನೀರನ್ನು ಅವಶ್ಯಕತೆಗನುವಾಗಿ ಮಿತವಾಗಿ ಬಳಸಬೇಕು. ಈ ಮೂಲಕ ಅಂತರ್ಜಲ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಕರೆ ನೀಡಿದರು.

Advertisement

ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೆಶನಾಲಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಶ್ರೀಕ್ಷೇತದ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮಂಗಳವಾರ ನಗರದ ಗುರುಭವನದಲ್ಲಿ ಆಯೋಜಿಸಿದ್ದ ಜಲಶಕ್ತಿ ಅಭಿಯಾನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು , ವಿದ್ಯಾರ್ಥಿಗಳು ಜಲಶಕ್ತಿ ಅಭಿಯಾನಕ್ಕೆ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಗಿಡ-ಮರಗಳ ನಾಶದಿಂದ ಮತ್ತು ಪ್ರಕೃತಿ ವಿಕೋಪದಿಂದ ಕಾಡುಗಳು ನಾಶವಾಗುತ್ತಿವೆ. ಇದರಿಂದಾಗಿ ಮಳೆ ಪ್ರಮಾಣ ಕಡಿಮೆಯಾಗಿದೆ. ಈ ದಿಸೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ನೀಡಬೇಕು. ರೈತರು ಕೃಷಿ ವಿಜ್ಞಾನಿಗಳ ಸಲಹೆ ಮತ್ತು ಮಾರ್ಗದರ್ಶನ ಪಡೆದು ಕಡಿಮೆ ನೀರಿನಲ್ಲಿ ಬೆಳೆಯುವಂತಹ ಬೆಳೆಯನ್ನು ಬೆಳೆಯ ಬೇಕೆಂದರು.

ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಸಿ. ಹೊರಕೇರಪ್ಪ ಮಾತನಾಡಿ, ತಾಲೂಕಿನಲ್ಲಿ ವೇದಾವತಿ ಮತ್ತು ಸುವರ್ಣಮುಖೀ ನದಿಗಳು ಹರಿಯುತ್ತಿರುವುದು ಈ ಭಾಗದ ರೈತರ ಹಾಗೂ ಜನರ ಪುಣ್ಯ. ವೇದಾವತಿ ನದಿಗೆ ಅಡ್ಡಲಾಗಿ ವಿವಿ ಸಾಗರ ಜಲಾಶಯ ಹಾಗು ಸುವರ್ಣಮುಖೀ ನದಿಗೆ ಅಡ್ಡಲಾಗಿ ಗಾಯತ್ರಿ ಜಲಾಶಯವನ್ನು ಮೈಸೂರು ಮಹಾರಾಜರು ನಿರ್ಮಾಣ ಮಾಡಿ ಕುಡಿಯುವ ನೀರು ಮತ್ತು ನೀರಾವರಿಗೆ ಆದ್ಯತೆ ನೀಡಿದ್ದಾರೆ. ಆದರೆ ಕಳೆದ ಹತ್ತು ವರ್ಷಗಳಿಂದ ಮಳೆ ಆಗದೇ ಇರುವುದರಿಂದ ಅಂತರ್ಜಲ ಮಟ್ಟ ಕಡಿಮೆಯಾಗಿ ಬರಗಾಲ ಎದುರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್‌. ತಿಮ್ಮಯ್ಯ, ಜಿಲ್ಲಾ ಪಂಚಾಯತ್‌ ಸದಸ್ಯರಾದ ಶಶಿಕಲಾ ಸುರೇಶ್‌ಬಾಬು, ತಾಲೂಕು ಪಂಚಾಯತ್‌ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಯಶವಂತರಾಜು, ಓಂಕಾರಪ್ಪ, ಪಿಟ್ಲಾಲಿ ಕರಿಯಪ್ಪ, ಕೃಷಿ ಇಲಾಖೆ ಉಪನಿರ್ದೇಶಕಿ ಡಾ| ಸುಜಾತಾ, ಸಹಾಯಕ ಕೃಷಿ ನಿರ್ದೇಶಕ ಪ್ರವೀಣ್‌ ಚೌಧರಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ತೋಟಯ್ಯ, ಕೃಷಿ ವಿಜ್ಞಾನಿ ಶರಣಪ್ಪ ಜಂಗಡಿ, ಓಂಕಾರಪ್ಪ , ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next