Advertisement
ಬಾಪು ಅವರ ಕಾಲಾತೀತ ಬೋಧನೆಗಳು ಪ್ರತಿಯೊಬ್ಬರ ಹಾದಿಯನ್ನು ಬೆಳಗಿಸುತ್ತಲೇ ಇವೆ ಎಂದು ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದಾರೆ. ಮಹಾತ್ಮ ಗಾಂಧಿ ಅವರನ್ನು ಬಾಪು ಅಥವಾ ರಾಷ್ಟ್ರಪಿತ ಎಂದು ಪ್ರೀತಿಯಿಂದ ಸ್ಮರಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ ಅವರು “ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ಗೆ ಬಂದು ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೂಡಾ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಇದನ್ನೂ ಓದಿ: Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ
Related Articles
Advertisement