Advertisement

ಜಮ್ಮು-ಕಾಶ್ಮೀರ, ಕೇಂದ್ರಾಡಳಿತ ಪ್ರದೇಶದ ಜನತೆಗೆ “ಆಯುಷ್ಮಾನ್ ಭಾರತ್” ಯೋಜನೆ ಜಾರಿ

02:49 PM Dec 26, 2020 | Nagendra Trasi |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಡಿ.26ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂಜೆಎವೈ)ಯನ್ನು ಉದ್ಘಾಟಿಸಲಿದ್ದು, ಈ ಯೋಜನೆಯ ಪ್ರಯೋಜನ ಜಮ್ಮು-ಕಾಶ್ಮೀರ ಮತ್ತು ಕೇಂದ್ರಾಡಳಿತ ಪ್ರದೇಶದ ಎಲ್ಲಾ ನಿವಾಸಿಗಳಿಗೆ ಲಭ್ಯವಾಗಲಿದೆ ಎಂದು ಹೇಳಿದರು.

Advertisement

ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂಜೆಎವೈ)ಯ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ನಾ ಕೂಡಾ ಭಾಗವಹಿಸಿದ್ದರು.

ಈ ಸ್ಕೀಮ್ ಎಲ್ಲಾ ವಿಧದ ಆರೋಗ್ಯ ಸಂಬಂಧಿ ಹಾಗೂ ಆರ್ಥಿಕ ರಕ್ಷಣೆ ನೀಡುವುದರ ಜತೆಗೆ ಅಗತ್ಯವಿರುವ ಆರೋಗ್ಯ ಸೇವೆಯನ್ನು ಜನತೆಗೆ ಒದಗಿಸಲಿದೆ. ಜಮ್ಮು-ಕಾಶ್ಮೀರದ ಮತ್ತು ಕೇಂದ್ರಾಡಳಿತ ಪ್ರದೇಶದೆ ಎಲ್ಲಾ ನಾಗರಿಕರ ಪ್ರತೀ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಿದೆ. ಅಲ್ಲದೇ ಇದು ಹೆಚ್ಚುವರಿಯಾಗಿ ಸುಮಾರು 15 ಲಕ್ಷ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ:ಬ್ರಿಟನ್ ನಿಂದ ಮೈಸೂರಿಗೆ ಬಂದ ಒಬ್ಬರಲ್ಲಿ ಕೋವಿಡ್ ಸೋಂಕು ಪತ್ತೆ: ರೋಹಿಣಿ ಸಿಂಧೂರಿ

21 ಲಕ್ಷ ಮಂದಿಗೆ ಇದರಿಂದ ಪ್ರಯೋಜನವಾಗಲಿದೆ. ಪ್ರತೀ ಕುಟುಂಬಕ್ಕೆ 5 ಲಕ್ಷ ರೂ.ಮೌಲ್ಯದ ಆರೋಗ್ಯ ವಿಮೆ ಇದರ ವ್ಯಾಪ್ತಿಯಲ್ಲಿ ಸಿಗಲಿದೆ. ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಕೇಂದ್ರಾಡಳಿತ ಪ್ರದೇಶಕ್ಕೂ ಕೇಂದ್ರದ ಯೋಜನೆಗಳು ಈಗ ವಿಸ್ತರಣೆಯಾಗುತ್ತಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next