ದಾವಣಗೆರೆ: ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಐತಿಹಾಸಿಕ ಬಜೆಟ್ ಆಗಿದ್ದು ರಾಜ್ಯಕ್ಕೆ ಸಿಂಹಪಾಲು ಸೌಲಭ್ಯ ದೊರಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್ ನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದ ನಡುವೆಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಶಾದಾಯಕ ಬಜೆಟ್ ಮಂಡಿಸಿದ್ದಾರೆ. ಆದಾಯ ತೆರಿಗೆ ಹೆಚ್ಚಿಸದೆ, ಸಾಲಕ್ಕೂ ಮೊರೆ ಹೋಗದೇ ಆರ್ಥಿಕ ಕ್ರೋಢೀಕರಣದ ಲೆಕ್ಕಾಚಾರದಲ್ಲಿ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದರು.
ಬಜೆಟ್‌ನಲ್ಲಿ ಕೃಷಿ ಮೂಲ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕೃಷಿ ಸಾಲಕ್ಕೆ ಹೆಚ್ಚಿನ ಅವಕಾಶ ನೀಡಿದ್ದು ರೈತಪರ ಬಜೆಟ್ ಮಂಡಿಸಲಾಗಿದೆ. ಗ್ರಾಮೀಣ ಪ್ರದೇಶದ ಮೂಲಸೌಲಭ್ಯಕ್ಕೆ ಹೆಚ್ಚಿನ ಅನುದಾನ ಘೋಷಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದ್ದು ಎಲ್ಲ ವರ್ಗದಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಜಾತಿ ಸಮಾವೇಶಗಳಿಗೆ ಯಾಕೆ ಸಂಘ ಪರಿವಾರ ಪ್ರಾಯೋಜಕತ್ವ ನೀಡುತ್ತಿದೆ ? : ಸಿದ್ದರಾಮಯ್ಯ
ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಲೆ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಲಿವೆ.ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಡಿ.ಎಸ್. ಶಿವಶಂಕರಪ್ಪ, ಕೆ.ಎಸ್. ಕೃಷ್ಣಕುಮಾರ್, ವಿಶ್ವಾಸ್, ಹನುಮಂತಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.