ಘಟಕಗಳು, ಶಾಸಕರು, ಮಾಜಿ ಶಾಸಕರು, ರಾಜ್ಯ ಪದಾಧಿಕಾರಿಗಳಿಗೆ ಏನೇ ಸಣ್ಣಪುಟ್ಟ ವ್ಯತ್ಯಾಸ ಇದ್ದರೂ ರಾಜ್ಯ ಹಾಗೂ ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುವಂತೆ ಫರ್ಮಾನು ಹೊರಡಿಸಲಿವೆ. ಪ್ರತಿ ಲೋಕಸಭೆ ಕ್ಷೇತ್ರದಲ್ಲಿ ಸಮನ್ವಯ ಸಾಧಿಸಲು ಕಾಂಗ್ರೆಸ್-ಜೆಡಿಎಸ್‌ನ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಲು ತೀರ್ಮಾನಿಸಿದೆ.
Advertisement
ಸೋಮವಾರ ಖಾಸಗಿ ಹೋಟೆಲ್‌ನಲ್ಲಿ ಚುನಾವಣಾ ಕಾರ್ಯತಂತ್ರ ಕುರಿತು ಸಭೆ ನಡೆಸಿದ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ, ಮೊದಲ ಹಾಗೂ ಎರಡನೇ ಹಂತದ ಚುನಾವಣೆಯಲ್ಲಿ ಅನುಸರಿಸಬೇಕಾದ ರೂಪು-ರೇಷೆ ಚರ್ಚಿಸಿ ಅಂತಿಮಗೊಳಿಸಿದರು.
Related Articles
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು ಲೋಕಸಭೆ ಚುನಾವಣೆಯಲ್ಲೂ ಒಟ್ಟಾಗಿ ಹೋರಾಟ ಮಾಡಿ ಅತಿ ಹೆಚ್ಚು ಸೀಟು ಗೆಲ್ಲುವ ಮೂಲಕ ಮೈತ್ರಿಕೂಟ ಮತ್ತಷ್ಟು ಗಟ್ಟಿಗೊಳಿಸಲಿದ್ದೇವೆ ಎಂದು ಹೇಳಿದರು. ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ದೇಶದಲ್ಲಿ ಎದುರಾದ 13 ಉಪ ಚುನಾವಣೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಶಕ್ತಿ ಹೆಚ್ಚಿಸಿಕೊಂಡಿದೆ ಎಂದೂ ತಿಳಿಸಿದರು.
Advertisement
ಪರಮೇಶ್ವರ್ ಗೈರುಚುನಾವಣಾ ಕಾರ್ಯತಂತ್ರ ಕುರಿತು ಸೋಮವಾರ ರಾತ್ರಿ ದೇವೇಗೌಡರ ನಿವಾಸದಲ್ಲಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ನಡೆಸಿದ ಸಭೆ ಹಾಗೂ ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆಸಿ ಮಾತುಕತೆಯಲ್ಲೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರುಹಾಜರಾಗಿದ್ದರು, ತುಮಕೂರು ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಅವರು ಈ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಪೂರ್ವ ನಿಗದಿತ ಕಾರ್ಯಕ್ರಮ ಇದ್ದ ಕಾರಣ ಅವರು ಬಂದಿಲ್ಲ. ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಕಾವಲುಗಾರರೊಂದಿಗೆ ಆಡಿಯೋ ಸಂವಾದ
ದೇಶದ 25 ಲಕ್ಷ ಚೌಕಿದಾರ (ಕಾವಲುಗಾರ) ರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಆಡಿಯೋ ಸಂವಾದ ನಡೆಸಲಿದ್ದಾರೆ. ಈ ಮೂಲಕ ತಮ್ಮ ಮೈನ್ ಭೀ ಚೌಕಿ ದಾರ್ ಆಂದೋಲನವನ್ನು ಮತ್ತಷ್ಟು ತೀವ್ರಗೊಳಿಸಲಿದ್ದಾರೆ. ಪಕ್ಷದ ಮಾಧ್ಯಮದ ಘಟಕದ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಅನಿಲ್ ಬಲೂನಿ ಅವರು ಈ ಮಾಹಿತಿ ನೀಡಿದ್ದು, ಮೋದಿ ಅವರು, ಚೌಕಿದಾರರ ಜತೆ “ಹೋಳಿ ರಂಗಿ’ನ ಸಡಗರ ಹಂಚಿಕೊಳ್ಳಲಿದ್ದಾರೆ ಎಂದಿದ್ದಾರೆ. ಇದಷ್ಟೇ ಅಲ್ಲ, ಮಾ. 31ಕ್ಕೆನಾನೂ ಚೌಕಿದಾರ ಆಂದೋಲನದಲ್ಲಿ ಭಾಗವಹಿಸಿದ್ದವರ ಜತೆಯೂ ಮೋದಿ ಸಂವಾದ ನಡೆಸಲಿದ್ದಾರೆ. ಇದಕ್ಕಾಗಿ 500 ಕಡೆಗಳಿಂದ ಜನ ವಿಡಿಯೋ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರು ತಮ್ಮ ಕಾರ್ಯಕರ್ತರಿಗೆ ಸಾರ್ವಜನಿಕವಾಗಿ ವರ್ತಿಸುವುದನ್ನು ಕಲಿಸಲಿ.ಗಣ್ಯರು ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದು ಬಿಜೆಪಿಯವರಿಗೆ ಗೊತ್ತಿಲ್ಲವೇ?
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ದೇಶವನ್ನು ತುಂಡು ಮಾಡಬೇಕು ಎಂದು ಹೇಳುವ ಗುಂಪಿಗೆ ಆತ್ಮೀಯ ಅಪ್ಪುಗೆ ನೀಡುವ ನೀವು(ರಾಹುಲ್) ಶಾಂತಿಯಿಂದ ಮೋದಿ ಪರ ಘೋಷಣೆ ಹಾಕಿದವರನ್ನು ಬಂಧಿಸಿದ್ದೇಕೆ?
– ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ