Advertisement
ಅಂದು ಸಂಜೆ 6 ರಿಂದ 8 ಗಂಟೆ ವರೆಗೆ ನೂತನ ರಥದಲ್ಲಿ ಅದ್ದೂರಿ ರಥೋತ್ಸವ ಜರುಗುವುದು. ಮರುದಿನ ಮಂಗಳವಾರ ಆ. 16 ರಂದು ಮಧ್ಯಾಹ್ನ 3ಕ್ಕೆ ಹೆಸರಾಂತ ಕುಸ್ತಿ ಪಟುಗಳಿಂದ ಜಂಗೀ ನಿಕಾಲಿ ಕುಸ್ತಿಗಳು ಜರುಗುವವು. ಆ. 17 ಬುಧವಾರ ಸಂಜೆ 6 ಕ್ಕೆ ಕಳಸ ಇಳಿಸುವ ಮತ್ತು ಕರಡಿ ಮಜಲು ಜರುಗುವುದು.
Related Articles
Advertisement
ಸಾಂಗ್ಲಿ ಸಂಸ್ಥಾಪಕರ ಭೇಟಿ: ಸಾಂಗ್ಲಿ ಸಂಸ್ಥಾನದ ಅಡಿಯಲ್ಲಿದ್ದ ರಬಕವಿ ಗ್ರಾಮಕ್ಕೆ ರಾಜ ಮನೆತನದ ಸಂಬಂಧವಿತ್ತು. ಆಗ ಗ್ರಾಮದ ಉಮದಿ ಅಣ್ಣನವರೆಂದೇ ಹೆಸರು ಮಾಡಿದ ಮಲ್ಲೇಶಪ್ಪಣ್ಣಾ ಉಮದಿ ಯವರು ರಬಕವಿ ಊರು ಕಟ್ಟಿದವರಾಗಿದ್ದು, ಅವರು ಊರಲ್ಲಿ ತಿರುಗಾಡಲು ಬಂದರೆ ಮಹಿಳೆಯರು ಯುವಕರು ಮರ್ಯಾದೆ ಕೊಟ್ಟು ಬೀದಿಯಲ್ಲಿ ನಿಲ್ಲತ್ತಿರಲಿಲ್ಲ. ಆಗಿನ ಕಾಲದಲ್ಲಿ ಹಿರಿಯರಿಗೆ ಅಷ್ಟೊಂದು ಮರ್ಯಾದೆ ಇತ್ತೆಂದು ಟ್ರಸ್ಟನ ಹಿರಿಯರು ಹೇಳುತ್ತಾರೆ. 1944 ರಲ್ಲಿ ಸಾಂಗ್ಲಿ ಸಂಸ್ಥಾನ ಸಂಸ್ಥಾಪಕರು ಮತ್ತು ಮಂತ್ರಿಮಂಡಲ ಜಾತ್ರೆಗೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ಹೋಗಿದ್ದರು ಎಂದು ಹೇಳಲಾಗುತ್ತದೆ. ಉಮದಿ ಅಣ್ಣನವರಿಗೊಂದು ಸಾಂಗ್ಲಿ ಸಂಸ್ಥಾನದಲ್ಲಿ ಜರುಗುವ ಮಂತ್ರಿಮಂಡಲ ಸಭೆಯಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಕೂಡ ಮಾಡಿದ್ದರು ಎನ್ನಲಾಗುತ್ತದೆ.
ನೆಹರು ಮತ್ತು ಇಂದಿರಾ ಭೇಟಿ: ಬಣ್ಣ ಹಾಗೂ ಜವಳಿ ಉದ್ಯೋಗದಲ್ಲಿ ತನ್ನದೇ ಆದ ಕಾರ್ಯವೈಕರಿ ಹೊಂದಿದ ರಬಕವಿ ನಗರ ಛೋಟಾ ಮುಂಬೈ ಎಂದು ಹೆಸರು ಮಾಡಿತ್ತು. 1956 ಏ. 8 ರಂದು ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ ನೆಹರು ಹಾಗೂ ಇಂದಿರಾ ಗಾಂದಿಯವರು ಶಂಕರಲಿಂಗ ಟ್ರಸ್ಟ್ ಗೆ ಬೇಟಿ ನೀಡಿ ಇಲ್ಲಿಯ ನೇಕಾರಿಕೆಯ ಕುರಿತು ಮಾತನಾಡಿದ್ದನ್ನು ಕೆಲ ಹಿರಿಯರು ಹೇಳುತ್ತಾರೆ. ನಂತರ ದೇವರ ದರ್ಶನ ಪಡೆದು ಹೋದರು ಎಂದರು ಹೇಳಲಾಗುತ್ತದೆ.
ಕಳೆದೆರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಜಾತ್ರೆ ಪೂರ್ಣ ಪ್ರಮಾಣದಲ್ಲಿ ನಡೆದಿರಲಿಲ್ಲ. ಈ ವರ್ಷ ಸಂಭ್ರಮದಿಂದ ಜಾತ್ರೆಯನ್ನು ಕೈಗೊಳ್ಳಲಾಗುವುದು. –ಬಾಲಚಂದ್ರ ಉಮದಿ (ಅಣ್ಣನವರು) ಅಧ್ಯಕ್ಷರು ಶಂಕರಲಿಂಗ ದೇವಸ್ಥಾನ ಟ್ರಸ್ಟ್
-ಕಿರಣ ಶ್ರೀಶೈಲ ಆಳಗಿ