Advertisement

ಐತಿಹಾಸಿಕ ಸ್ಥಳ ಅಭಿವೃದ್ಧಿಗೆ ಕೇಂದ್ರಕ್ಕೆ ಪ್ರಸ್ತಾವನೆ

03:19 PM Sep 29, 2021 | Team Udayavani |

ದಾವಣಗೆರೆ: ಜಿಲ್ಲೆಯ ಹಲವು ಐತಿಹಾಸಿಕಸ್ಥಳಗಳನ್ನು ಹೊಂದಿದ್ದು, ಅವುಗಳಸಂರಕ್ಷಣೆ ಅಭಿವೃದ್ಧಿಗಾಗಿ ನೂರು ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಪ್ರವಾಸೋದ್ಯಮ ಇಲಾಖೆ, ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನೀರ್ಥಡಿ ಗ್ರಾಮದ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಲವಾರು ಐತಿಹಾಸಿಕ ಸ್ಥಳಗಳಲ್ಲಿ ನೀರ್ಥಡಿ ರಂಗನಾಥಸ್ವಾಮಿ ದೇವಸ್ಥಾನಪುರಾತನ ಸಾಂಸ್ಕೃತಿಕ ವೈಭವ ಹೊಂದಿರುವ ದೇವಾಲಯವಾಗಿದೆ. ಮಹರ್ಷಿಗಳು ತಪಸ್ಸುಮಾಡುವಾಗ ಬಂದಂತಹ ನೀರನ್ನು ತಡೆದುನಿಲ್ಲಿಸಿದ್ದರಿಂದ ನೀರ್ಥಡಿ ಎಂಬ ಹೆಸರುಬಂದಿದೆ ಎಂದು ಇತಿಹಾಸ ಹೇಳುತ್ತದೆ. ಇಂತಹಐತಿಹಾಸಿಕ, ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವದೇವಾಲಯವನ್ನು ಜೀರ್ಣೋದ್ಧಾರಗೊಳಿಸಿಪ್ರವಾಸಿ ತಾಣವನ್ನಾಗಿಸಿ ಮಾಡಲಾಗುವುದು ಎಂದರು.

ಸಂಸದ ಡಾ. ಜಿ.ಎಂ. ಸಿದ್ದೇಶ್ವರಮಾತನಾಡಿ, ಜಿಲ್ಲೆಯ ಆನಗೋಡುಗ್ರಾಮದ ನೀರ್ಥಡಿಯಲ್ಲಿರುವ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಸ್ಥಾನ ಪ್ರಾಚೀನ ಕಾಲದಿಂದಲೂ ಐತಿಹಾಸಿಕ ಸ್ಥಳವಾಗಿದೆ.ಚಿತ್ರದುರ್ಗದ ಪಾಳೆಗಾರರು ಈ ದೇವಸ್ಥಾನವನ್ನುನಿರ್ಮಿಸಿದ್ದರು. ಕಾಲ ಕಳೆದಂತೆ ದೇವಸ್ಥಾನದಬಹು ಭಾಗಗಳು ಶಿಥಿಲಗೊಂಡಿದ್ದು, ಅದರಜೀರ್ಣೋದ್ಧಾರದ ಕಾರ್ಯವಾಗಬೇಕಾಗಿದೆ.ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರವಾಸೋದ್ಯಮಹಾಗೂ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಸಚಿವರಾದ ಆನಂದ್‌ ಸಿಂಗ್‌ ಅವರೊಂದಿಗೆಮಾತನಾಡಿ ಕೇಂದ್ರ ಸರ್ಕಾರಕ್ಕೆ ಮನವಿಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ:ದಾಂಡೇಲಿಯಲ್ಲಿ ನೀರಿನ ಪೈಪ್ ಒಡೆದು ವಿದ್ಯುತ್ ಲೈನ್ ಮೇಲೆ ಚಿಮ್ಮಿದ ನೀರು : ತಪ್ಪಿದ ಅನಾಹುತ

Advertisement

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಮಾತನಾಡಿ, ದೇವಸ್ಥಾನದ ಅಭಿವೃದ್ಧಿಗೆಬೇಕಾದ ಪೂರಕ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ| ವಿಜಯಮಹಾಂತೇಶ ಬಿ.ದಾನಮ್ಮನವರ್‌, ದಾವಣಗೆರೆ ತಹಶೀಲ್ದಾರ್‌ ಬಿ.ಎನ್‌. ಗಿರೀಶ್‌, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಪಾಲಾಕ್ಷಿ, ಗ್ರಾಪಂ ಸದಸ್ಯರಾದ ಆರ್‌. ರೂಪಾ,ವನಜಾಕ್ಷಮ್ಮ, ಚನ್ನಬಸಮ್ಮ, ಎನ್‌.ಜಿ. ನಾಗರಾಜ,ಕಮಲಮ್ಮ, ಸವಿತಾ ಮಲ್ಲೇಶ್‌ ಮೊದಲಾದವರುಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next