Advertisement
ಕೇಂದ್ರ ಸಂಸ್ಕೃತಿ ಸಚಿವಾಲಯ ಈ ಬಗ್ಗೆ ಯೋಜನೆಯೊಂದನ್ನು ರೂಪಿಸಿದ್ದು, ಈ ಐತಿಹಾಸಿಕ ಸ್ಥಳಗಳಿಗೆ ಇನ್ನಷ್ಟು ವಿದೇಶಿ ಮತ್ತು ದೇಶೀಯ ಪ್ರವಾಸಿಗರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಇದರ ಅಂಗವಾಗಿಯೇ ಈ ಐತಿಹಾಸಿಕ ಸ್ಥಳಗಳಿಗೆ ರಾತ್ರಿ 9ರವರೆಗೂ ಪ್ರವೇಶ ನೀಡುವ ಬಗ್ಗೆ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಏನು ಯೋಜನೆ?
ದೇಶದ ಬಹುತೇಕ ಪ್ರವಾಸಿ ಸ್ಥಳಗಳಲ್ಲಿ ಸಂಜೆಯಾಗುತ್ತಲೇ ಪ್ರವೇಶ ನಿಷೇಧಿಸಲಾಗುತ್ತದೆ. ಹೀಗಾಗಿ ಸಂಜೆ ಕಳೆದ ಬಳಿಕ ಪ್ರವಾಸಿಗರು ವೃಥಾ ಕಾಲಹರಣ ಮಾಡುತ್ತಾರೆ. ಇದರಿಂದ ಎಷ್ಟೋ ಪ್ರವಾಸಿಗರು ಹಲವಾರು ಕ್ಷೇತ್ರಗಳನ್ನು ಸಂದರ್ಶಿಸುವುದೇ ಇಲ್ಲ. ಐತಿಹಾಸಿಕ ಸ್ಥಳಗಳಲ್ಲಿ ಹೆಚ್ಚಿನ ವಿದ್ಯುತ್ ವ್ಯವಸ್ಥೆ, ಧ್ವನಿ-ಬೆಳಕು ಪ್ರದರ್ಶನ, ವಸ್ತು ಪ್ರದರ್ಶನಗಳಂಥ ಆಕರ್ಷಣೆಗಳನ್ನು ಆರಂಭಿಸುವುದರಿಂದ ಐತಿಹಾಸಿಕ ಸ್ಥಳಗಳಿಗೆ ಜನರ ಆಗಮನವೂ ಹೆಚ್ಚುತ್ತದೆ. ಜೊತೆಗೆ ಉದ್ಯಮ ಪ್ರವಾಸ, ಮತ್ತಿತರ ಉದ್ದೇಶಗಳಿಗಾಗಿ ಭಾರತಕ್ಕೆ ಬಂದವರು ಸಂಜೆ ವೇಳೆ ಇಂಥ ಐತಿಹಾಸಿಕ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸದ್ಯ ಈ ಐತಿಹಾಸಿಕ ಸ್ಥಳಗಳಿಗೆ ಇರುವ ಒಂದೇ ಒಂದು ಸಮಸ್ಯೆ ಬೆಳಕು ಮತ್ತು ಭದ್ರತಾ ವ್ಯವಸ್ಥೆ. ಹೇಗಾದರೂ ಮಾಡಿ ಭದ್ರತಾ ವ್ಯವಸ್ಥೆಯನ್ನು ನೀಡಬಹುದು, ಆದರೆ ಎಷ್ಟೋ ಸ್ಥಳಗಳಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆಯೇ ಇರುವುದಿಲ್ಲ. ಹೀಗಾಗಿ ಮೊದಲು ಈ ಭಾರತೀಯ ಪುರಾತತ್ವ ಇಲಾಖೆಗೆ ಸೇರಿದ ಸ್ಥಳಗಳಿಗೆ ಬೆಳಕಿನ ವ್ಯವಸ್ಥೆ ಮಾಡಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಜತೆಗೆ ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನೂ ನೀಡಬೇಕಾಗಿದೆ ಎಂದಿದ್ದಾರೆ.