Advertisement
1522ರಲ್ಲಿ ಎರಡು ವರ್ಷಗಳ ಪರ್ಯಾಯವನ್ನು ಪಲಿಮಾರು ಮಠದಿಂದ ಆರಂಭಿಸಿದ ಬಳಿಕ 1532ರಲ್ಲಿ ವಾದಿರಾಜ ಸ್ವಾಮಿಗಳು ಸ್ವತಃ ಪರ್ಯಾಯ ಪೀಠವನ್ನು ಅಲಂಕರಿಸಿದರು. ಪರ್ಯಾಯವಾದ ಬಳಿಕ 1538-39ರ ವೇಳೆ ವಿಜಯನಗರ ಸಾಮ್ರಾಜ್ಯದ ಕಡೆ ಸಂಚಾರಾರ್ಥ ವಾದಿರಾಜರು ತೆರಳಿದರು. 1541-42ರಲ್ಲಿ ಉತ್ತರ ಭಾರತ ಯಾತ್ರೆ ಕೈಗೊಂಡರು. ಆಗ ದಿಲ್ಲಿ, ಬದರಿಗೆ ಹೋದರು. ಅದೇ ವೇಳೆ ಅಯೋಧ್ಯೆಗೆ ತೆರಳಿ ಅಲ್ಲಿ ಉತ್ಖನನ ಮಾಡಿಸಿ ಹನುಮ-ಗರುಡನ ವಿಗ್ರಹವನ್ನು ತಂದು ಸುಮಾರು 1545ರ ವೇಳೆ ಪ್ರತಿಷ್ಠೆ ಮಾಡಿದರು.
ವಾದಿರಾಜರ ದಿವ್ಯದೃಷ್ಟಿ
Related Articles
ಯುಗದಲ್ಲಿ ದಶರಥನ ಅರಮನೆಯಲ್ಲಿ ರಾಮಚಂದ್ರನಿಗೆ ಪಟ್ಟಾಭಿಷೇಕವಾಗುವಾಗ ಸಿಂಹಾಸನದ ಮೆಟ್ಟಿಲಿನ ಬಲಭಾಗದಲ್ಲಿ ಹನುಮಂತ ಮತ್ತು ಎಡಭಾಗದಲ್ಲಿ ಗರುಡನ ಪ್ರತಿಮೆಗಳಿದ್ದವು. ಇದನ್ನು ದಿವ್ಯದೃಷ್ಟಿಯಿಂದ ತಿಳಿದ ವಾದಿರಾಜರು ಉತ್ಖನನ ನಡೆಸಿ ಉಡುಪಿಗೆ ತಂದು ಪ್ರತಿಷ್ಠಾಪಿಸಿದರು ಎನ್ನುವುದನ್ನೂ ತಮಗೆ ಪೀಳಿಗೆಯಿಂದ ಪೀಳಿಗೆಗೆ ತಿಳಿದುಬಂದಂತೆ ಶ್ರೀ ಸೋದೆ ಮಠಾಧಿಪತಿಗಳಾಗಿದ್ದ ಶ್ರೀ ವಿಶ್ವೊತ್ತಮ ತೀರ್ಥರು ತಿಳಿಸಿದ್ದರು ಎನ್ನುವುದನ್ನು ಡಾ| ನಿಪ್ಪಾಣಿ ಹೇಳುತ್ತಾರೆ.
Advertisement
1980ರ ದಶಕದಿಂದಲೂ ಅಯೋಧ್ಯಾ ರಾಮಜನ್ಮಭೂಮಿ ಚಳವಳಿ ಮುಂಚೂಣಿಯಲ್ಲಿದ್ದ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು 1992ರ ಡಿಸೆಂಬರ್ 6ರ ರಾತ್ರಿ ಹಳೆಯ ಕಟ್ಟಡ ಉರುಳಿದ ಮರುದಿನ ಬೆಳಗ್ಗೆ ಆಕಸ್ಮಿಕವಾಗಿ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸುವ ಭಾಗ್ಯವನ್ನು ಪಡೆದಿದ್ದರು. 2017ರ ನವೆಂಬರ್‌ನಲ್ಲಿ ನಡೆದ ಐತಿಹಾಸಿಕ ಧರ್ಮಸಂಸದ್ ಉದ್ಘಾಟನ ಭಾಷಣದಲ್ಲಿ 2019ರೊಳಗೆ ಅಯೋಧ್ಯಾ ಪ್ರಕರಣ ಇತ್ಯರ್ಥವಾಗಲಿದೆ ಎಂದಿದ್ದರು.