Advertisement

Hit-and-Run: ಕಟಪಾಡಿ ಹೆದ್ದಾರಿಯಲ್ಲಿ ಕಾರು ಢಿಕ್ಕಿಯಾಗಿ ಪಾದಚಾರಿ ಗಂಭೀರ

10:21 PM Jun 14, 2023 | Team Udayavani |

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಕಾರೊಂದು ಢಿಕ್ಕಿ ಹೊಡೆದು ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಕಟಪಾಡಿ ಕೆನರಾ ಬ್ಯಾಂಕ್ ಬಳಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ಗಾಯಳುವನ್ನು ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಢಿಕ್ಕಿ ಹೊಡೆದ ಕಾರು ಸ್ಥಳದಲ್ಲಿ ನಿಲ್ಲದೆ ಮಂಗಳೂರು ಕಡೆ ಹೋಗಿರುತ್ತದೆ ಎಂದು ತಿಳಿದು ಬಂದಿದೆ. ಕಾರಿನ ಪತ್ತೆಗೆ ಪೊಲೀಸರು ಬಲೆ ಬೀಸಿರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next