Advertisement

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿಟ್ಲರ್ ಮಾದರಿ ಸರಕಾರ: ಸುನಿಲ್‌

11:18 PM Jul 28, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹಿಟ್ಲರ್‌ ಸರಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ. ಇದು ತುರ್ತು ಪರಿಸ್ಥಿತಿಯ ದಿನಗಳನ್ನೂ ಮೀರಿಸುವಂತಿದೆ ಎಂದು ಮಾಜಿ ಸಚಿವ ವಿ.ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿ ಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್‌ ಸರಕಾರ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ. ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್‌ ಸರಕಾರದಲ್ಲಿ ಮಹಿಳೆಯರ ಹಕ್ಕು, ಮಾನ-ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವಲ್ಲವೇ? ನಿಮ್ಮ ಮನೆಯ ಹೆಣ್ಮಕ್ಕಳಿಗೂ ಅಪಮಾನ ವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ ಎಂದಿದ್ದಾರೆ.

ಹಿಟ್ಲರ್‌, ಮುಸಲೋನಿ ಯಂಥವರನ್ನು ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ ಎಂದು ಕಿಡಿಕಾರಿ¨ªಾರೆ.
ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಅವರೇ, ಹ್ಯಾಂಡ್‌ ಗ್ರೆನೇಡ್‌ ಹಾಗೂ ಸ್ಫೋಟಕಗಳನ್ನು ಮನೆಯಲ್ಲಿಟ್ಟುಕೊಂಡ ವರನ್ನು ಉಗ್ರರು ಎನ್ನುವುದಕ್ಕೆ ನಿಮಗೆ ಶಕ್ತಿಯಿಲ್ಲ. ಪೊಲೀಸ್‌ ಠಾಣೆಗೆ ಬೆಂಕಿ ಹಾಕಿದವರು ನಿಮ್ಮ ದೃಷ್ಟಿಯಲ್ಲಿ ಅಮಾಯಕರು. ಆದರೆ ಉಡುಪಿ ಕಾಲೇಜಿನಲ್ಲಿ ನಡೆದಿದ್ದು ತಮಾಷೆ ಪ್ರಕರಣ, ಮಕ್ಕಳಾಟ. ನೀವು ಕರ್ನಾಟಕದ ಗೃಹ ಸಚಿವರೋ ಅಥವಾ ಒಂದು ವರ್ಗಕ್ಕೋ ಎಂದು ಕಿಡಿ ಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next