Advertisement

HIV: ಕೊಡಗಿನಲ್ಲಿ 13 ವರ್ಷಗಳಲ್ಲಿ 657 ಸಾವು

11:45 PM Nov 22, 2023 | Team Udayavani |

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2009ರಿಂದ ಇಲ್ಲಿಯವರೆಗೆ 2,563 ಎಚ್‌ಐವಿ ಸೋಂಕಿತ ರನ್ನು ಗುರುತಿಸಲಾಗಿದೆ. 13 ವರ್ಷಗಳಲ್ಲಿ 657 ಸಾವು ಸಂಭವಿಸಿದೆ.

Advertisement

ಸೋಂಕನ್ನು 2025ರ ಒಳಗಾಗಿ ಶೂನ್ಯಕ್ಕೆ ಇಳಿಸುವ ನಿಟ್ಟಿನ ಗುರಿ ಸರಕಾರದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಿ. 1ರಂದು ವಿಶ್ವ ಏಡ್ಸ್‌ ದಿನದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಜಾಥಾ ನಡೆಯಲಿದೆ ಎಂದರು. ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕದ ನಿಯಂ ತ್ರಣಾಧಿಕಾರಿ ಡಾ| ಆನಂದ್‌ ಮಾತನಾಡಿ, ರಾಜ್ಯದ ಇತರ ಭಾಗಗಳಿಗೆ ಹೋಲಿಸಿದಲ್ಲಿ ಕೊಡಗಿನಲ್ಲಿ ಎಚ್‌ಐವಿ ಸೋಂಕು ಮತ್ತು ಏಡ್ಸ್‌ ನಿಯಂತ್ರಣದಲ್ಲಿದ್ದು, ಸೋಂಕಿತರಿಗೆ ಅಗತ್ಯ ಚಿಕಿತ್ಸೆಗ‌ಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next