Advertisement

ಎಚ್‌ಐವಿ, ಏಡ್ಸ್‌; ಅರಿವು ಮೂಡಿಸಿ : ಪ್ರಭಾರ ಜಿಲ್ಲಾಧಿಕಾರಿ ಸೂಚನೆ

01:30 AM Jan 18, 2019 | |

ಮಡಿಕೇರಿ: ವಿವಿಧ ಇಲಾಖೆಗಳ ವತಿಯಿಂದ ಕಾರ್ಯಕ್ರಮಗಳು ನಡೆಯುವ ಸಂದರ್ಭ ಎಚ್‌ಐವಿ ಮತ್ತು ಏಡ್ಸ್‌ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕೆಂದು ಪ್ರಭಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು ಸೂಚನೆ ನೀಡಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‌ಐವಿ/ಏಡ್ಸ್‌ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆ ಗಳಿಂದ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
  
ಎಚ್‌ಐವಿ/ಏಡ್ಸ್‌ ಬರುವುದಕ್ಕೂ ಮೊದಲು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಮಾಹಿತಿ ಇರಬೇಕು ಎಂದರು. 
   
ಎಚ್‌ಐವಿ/ಏಡ್ಸ್‌ ನಿಯಂತ್ರಣ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮಾಹಿತಿ ನೀಡುವುದು, ಸಾಕ್ಷ್ಯಚಿತ್ರದ ಮೂಲಕ ಜಾಗೃತಿ ಮೂಡಿಸುವುದು, ಹೀಗೆ ಹಲವು ಕಾರ್ಯಕ್ರಮಗಳನ್ನು ಪ್ರತಿತಿಂಗಳು ಹಮ್ಮಿಕೊಳ್ಳುವಂತೆ ಅವರು ಸಲಹೆ ಮಾಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌ ಅವರು ಎಚ್‌ಐವಿ/ಏಡ್ಸ್‌ ಪೀಡಿತರಿಗೆ ವಿವಿಧ ಇಲಾಖೆಗಳಿಂದ ಒದಗಿಸಲಾಗುವ ಸೌಲಭ್ಯಗಳು ಸಕಾಲದಲ್ಲಿ ದೊರೆಯುವಂತಾಗಬೇಕು ಎಂದು ಅವರು ತಿಳಿಸಿದರು.  ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಶಿವಕುಮಾರ್‌ ಅವರು ಜಿಲ್ಲೆಯಲ್ಲಿ ಎಪ್ರಿಲ್‌ನಿಂದ ಡಿಸೆಂಬರ್‌ ಅಂತ್ಯದವರೆಗೆ 115 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿವೆ ಎಂದು ಅವರು ಮಾಹಿತಿ ನೀಡಿದರು.  

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ| ಆನಂದ್‌, ಜಿಲ್ಲಾಸ್ಪತ್ರೆಯ ಡಾ| ಮಂಜುನಾಥ್‌, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಎಸ್‌. ಸದಾಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ರಾಧಾ, ಕಾರ್ಯಕ್ರಮ ಅಧಿಕಾರಿ ಮಮ್ತಾಜ್‌, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಐಟಿಡಿಪಿ ಇಲಾಖೆಯ ರಂಗನಾಥ್‌ ಇತರರು ಮಾಹಿತಿ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next