ರಾಮನಗರ: ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದೆ. ಸದ್ಯ ಜಿಲ್ಲೆಯಲ್ಲಿ 467 ಮಂದಿ ಸೋಂಕಿತರಿದ್ದು ಎಆರ್‌ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏಪ್ರಿಲ್2018 ರಿಂದ ಮಾರ್ಚ್ 2019ರ ಅವಧಿಯಲ್ಲಿ ಜಿಲ್ಲೆಯಲ್ಲಿ 55333 ಮಂದಿ ಎಚ್‌ಐವಿ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದರು. ಈ ಪೈಕಿ 194 ಮಂದಿ ಸೋಂಕಿತರು ಪತ್ತೆಯಾಗಿದ್ದರು. ಏಪ್ರಿಲ್ 2019ರಿಂದ 2020ರ ಮಾರ್ಚ್ ಅವಧಿಯಲ್ಲಿ 63604 ಮಂದಿ ಸೋಂಕು ಪತ್ತೆಗಾಗಿ ಪರೀಕ್ಷೆ ಮಾಡಿಸಿಕೊಂಡಿದ್ದು194 ಮಂದಿ ಸೋಂಕಿತರು ಪತ್ತೆಯಾಗಿದ್ದರು. ಏಪ್ರಿಲ್2020ರಿಂದ ಅಕ್ಟೋಬರ್2020ರವರೆಗೆ 32940 ಮಂದಿ ಪರೀಕ್ಷೆಗೆ ಒಳಗಾಗಿದ್ದು 79 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿಕಳೆದ3 ವರ್ಷಗಳಲ್ಲಿ ಒಟ್ಟು151877ಮಂದಿ ಎಚ್‌ಐವಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 467 ಮಂದಿಗೆ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಇದೀಗ ಶೇ 0.30ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಗರ್ಭಿಣಿ ಮತ್ತು ಅವರ ಪತಿ ಸೇರಿದಂತೆ ವಿವಿಧ ಸೋಂಕು ಕಾಯಿಲೆ ಯವರಿಗೆ ಕಡ್ಡಾಯವಾಗಿ ಎಚ್‌ಐವಿ ಸೋಂಕು ಪರೀಕ್ಷೆಗಳು ನಡೆಯುತ್ತಿವೆ.
ಜಾಗತಿಕ ಒಗ್ಗಟ್ಟು ಜವಾಬ್ದಾರಿ ಹಂಚಿಕೆ: ವಿಶ್ವ ಆರೋಗ್ಯ ಸಂಸ್ಥೆ ಆದೇಶದಲ್ಲಿ ಪ್ರತಿ ಡಿ.1ರಂದು ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತಿದೆ. ವಿಶೇಷವಾಗಿ ಈ ದಿನ ಎಚ್‌ಐವಿ/ಏಡ್ಸ್ ಸೋಂಕಿನ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು, ಸೋಂಕು ಹರಡುವ ರೀತಿ, ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ಜನ ಸಾಮಾನ್ಯರಲ್ಲಿ ಮಾಹಿತಿ ಕೊಡುವುದು ಈ ದಿನಾಚರಣೆಯ ಪ್ರಮುಖ ಉದ್ದೇಶ. ಎಚ್‌ಐವಿಸೋಂಕು ತಡೆಗಾಗಿ ಜಾಗತಿಕ ಒಗ್ಗಟ್ಟು ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದಡಿ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ.
ಸೋಂಕಿತರಿಗೆವಿವಿಧ ಸರ್ಕಾರಿ ಸವಲತ್ತು : ಜಿಲ್ಲಾಸ್ಪತ್ರೆ-ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳು ಅಸ್ತಿತ್ವದಲ್ಲಿವೆ. ಜಿಲ್ಲಾಸ್ಪತ್ರೆಯಲ್ಲಿ ಡಿಎಸ್‌ಆರ್‌ಸಿ ಕೇಂದ್ರ ಅಸ್ತಿತ್ವದಲ್ಲಿದ್ದು ಇಲ್ಲಿ ಲೈಂಗಿಕ ಸೋಂಕು ಕುರಿತಾದ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಸೌಲಭ್ಯವಿದೆ. ಎಚ್‌ಐವಿ ಸೋಂಕಿತರಿಗಾಗಿ ಜಿಲ್ಲಾಸ್ಪತ್ರೆಯಲ್ಲಿ ಎಆರ್‌ಟಿ ಕೇಂದ್ರದಲ್ಲಿ ಉಚಿತ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಿಂದ ಉಚಿತ ಕಾನೂನು ಸೇವಾ ಸೌಲಭ್ಯದ ವ್ಯವಸ್ಥೆ ಇದ್ದು, ಪ್ರತಿ ಶನಿವಾರ ಎಆರ್‌ಟಿ ಕೇಂದ್ರದಲ್ಲೇ ನಡೆಯುತ್ತಿದೆ.ಸೋಂಕಿತರಿಗಾಗಿ ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳ ಮೂಲಕ ಸವಲತ್ತು ಜಾರಿಯಲ್ಲಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಧನಶ್ರೀ ಯೋಜನೆ, ಧಮನಿತ ಮಹಿಳೆಯರಿಗಾಗಿ ಚೇತನಾ ಯೋಜನೆ ಜಾರಿಯಲ್ಲಿದೆ.
ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ : ಡಿ.1ರಂದು ರಾಮನಗರದ ಸರ್ಕಾರಿಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು, ಏಡ್ಸ್ ಸೋಂಕಿನ ಬಗ್ಗೆ ತಿಳಿವಳಿಕೆ, ಏಡ್ಸ್ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವ 5 ಮಂದಿ ಆರೋಗ್ಯ ಸಿಬ್ಬಂದಿಗೆ ಸನ್ಮಾನ, ಮೂರು ರೆಡ್ ರಿಬ್ಬನ್ ಘಟಕಗಳ ಪದಾಧಿಕಾರಿಗಳಿಗೆ ಸನ್ಮಾನ ನಡೆಯಲಿದೆ. ಡಿಎಚ್‌ಒ ಡಾ.ನಿರಂಜನ್, ಏಡ್ಸ್ ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಕುಮಾರ್, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎನ್.ರವಿಕು ಮಾರ್ ಮುಂತಾದವರು ಭಾಗವಹಿಸಲಿದ್ದಾರೆ.