ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್-ಮುಜಾಹಿದ್ದೀನ್ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ (ಜೂನ್ 11) ತಿಳಿಸಿದ್ದಾರೆ.
ಶುಕ್ರವಾರ-ಶನಿವಾರ ನಸುಕಿನ ವೇಳೆ ಖಂಡಿಪೋರಾ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ.ನಿಷೇಧಿತ ಭಯೋತ್ಪಾದಕ ಸಂಘಟನೆಯ 1 ಭಯೋತ್ಪಾದಕನ ಹತ್ಯೆಯಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಶುಕ್ರವಾರ ಕಾಶ್ಮೀರದಲ್ಲಿ ಮೂರು ಕಡೆ ನಡೆಸಿದ ಕಾರ್ಯಾಚರಣೆಗಳಲ್ಲಿ ಇಬ್ಬರು ಸಕ್ರಿಯ ಉಗ್ರರು ಮತ್ತು ಮೂವರು ‘ಹೈಬ್ರಿಡ್ ಭಯೋತ್ಪಾದಕರು’ ಸೇರಿದಂತೆ ಆರು ಮಂದಿಯನ್ನು ಭದ್ರತಾ ಪಡೆಗಳು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಇದನ್ನೂ ಓದಿ : ಬಾಂಗ್ಲಾದೇಶಿ ನುಸುಳುಕೋರರಿಗೆ ಆಧಾರ್ ಕಾರ್ಡ್ ಪೂರೈಸುತ್ತಿದ್ದ ಜಾಲ ಪತ್ತೆ; ಹಲವರ ಬಂಧನ
Related Articles
ಇಬ್ಬರು ಸಕ್ರಿಯ ಉಗ್ರರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಅವರನ್ನು ಬಾರಾಮುಲ್ಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.