Advertisement

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ; ಕಾರಿನಲ್ಲಿದ್ದ 45 ಕೆಜಿ ಸ್ಫೋಟಕ ನಿಷ್ಕ್ರಿಯ

01:20 PM May 28, 2020 | Nagendra Trasi |

ಜಮ್ಮು-ಕಾಶ್ಮೀರ: ಪುಲ್ವಾಮಾ ದಾಳಿಯ ನೆನಪು ಮಾಸುವ ಮುನ್ನವೇ ಉಗ್ರರು ಮತ್ತೆ ಪುಲ್ವಾಮಾ ಮಾದರಿ ದಾಳಿ ನಡೆಸಲು ಉದ್ದೇಶಿಸಿದ್ದ ಸಂಚನ್ನು ಪೊಲೀಸರು ವಿಫಲಗೊಳಿಸಿರುವ ಘಟನೆ ವರದಿಯಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸ್ಯಾಂಟ್ರೋ ಕಾರಿನೊಳಗೆ ಇಟ್ಟಿದ್ದ ಐಇಡಿ(ಸುಧಾರಿತ ಸ್ಫೋಟಕ ಸಾಧನ)ಯನ್ನು ಬಾಂಬ್ ನಿಷ್ಕ್ರಿಯ ದಳ ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Advertisement

ಸ್ಫೋಟಕ ತುಂಬಿಸಿ ಇಟ್ಟಿದ್ದ ಕಾರು ಅದಿಲ್ ಗೆ ಸೇರಿದ್ದು, ಈತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಭಯೋತ್ಪಾದಕನಾಗಿದ್ದು, ಅದಿಲ್ ಜೈಶ್ ಎ ಮೊಹಮ್ಮದ್ ಸಂಘಟನೆಯ ಜತೆಗೂ ಸಂಪರ್ಕ ಹೊಂದಿರುವುದಾಗಿ ವರದಿ ತಿಳಿಸಿದೆ.

ಐಜಿ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಸ್ಫೋಟದ ಸಂಚು ನಡೆಸಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಆ ನೆಲೆಯಲ್ಲಿ ನಾವು ಅದಿಲ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದೇವು. ಯಾಕೆಂದರೆ ಹಿಜ್ಬುಲ್ ಸಂಘಟನೆ ಉಗ್ರ ಜೈಶ್ ಜತೆಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ವರದಿ ವಿವರಿಸಿದೆ.

ಸ್ಯಾಂಟ್ರೋ ಕಾರಿನೊಳಗೆ ಅಂದಾಜು 40-45 ಕೆಜಿ ಐಇಡಿ ಸ್ಫೋಟಕವನ್ನು ಇಟ್ಟು ಭದ್ರತಾ ಪಡೆಯ ವಾಹನಗಳನ್ನು ಗುರಿಯಾಗಿರಿಸಿ ಸ್ಫೋಟ ನಡೆಸುವ ಸಂಚನ್ನು ಅದಿಲ್ ರೂಪಿಸಿದ್ದ. ಈ ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next