Advertisement

ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್‌ ಉಗ್ರ ಸಾವು

03:05 AM May 18, 2020 | Hari Prasad |

ಜಮ್ಮು: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಭಯೋತ್ಪಾದಕನೊಬ್ಬ ಮೃತಪಟ್ಟಿದ್ದಾನೆ.

Advertisement

ಇದೇ ವೇಳೆ, ಸೇನಾಪಡೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ.

ದೋಡಾ ಪಟ್ಟಣಕ್ಕೆ 26 ಕಿ.ಮೀ.ದೂರದ ಗುಂಡಾನಾ ವಲಯದ ಪೋಸ್ಟಾ-ಪೋತ್ರಾ ಹಳ್ಳಿಯಲ್ಲಿ ಭಯೋತ್ಪಾದಕರು ತಂಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನಾಪಡೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತು.

ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಇದೇ ವೇಳೆ, ಸೇನಾಪಡೆಯ ಯೋಧ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಗ್ರರ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ವಲಯದ ಐಜಿಪಿ ಮುಖೇಶ್‌ ಸಿಂಗ್‌ ತಿಳಿಸಿದ್ದಾರೆ.

ಎಲ್.ಒ.ಸಿ.ಯಲ್ಲಿ ಪಾಕ್‌ನಿಂದ ಗುಂಡಿನ ದಾಳಿ
ಈ ಮಧ್ಯೆ, ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ಥಾನದ ಸೇನಾಪಡೆಗಳು ರವಿವಾರ ಬೆಳಗ್ಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ.

Advertisement

ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾಪಡೆಗಳೂ ಗುಂಡಿನ ದಾಳಿ ನಡೆಸಿದವು. ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸೇನಾಪಡೆಯ ವಕ್ತಾರರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next