Advertisement

“ಕೈ’ಪ್ರಮುಖ ನಿರ್ಧಾರ ಸಭೆಗಳಿಂದ “ಎಚ್ಕೆ’ದೂರ 

01:30 AM Mar 20, 2019 | |

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೈತ್ರಿ ಪಕ್ಷಗಳು ಜಂಟಿಯಾಗಿ ಪ್ರಚಾರ ಕೈಗೊಳ್ಳುವ ಕುರಿತು ಎರಡೂ ಪಕ್ಷಗಳ ನಾಯಕರು ಮಂಗಳವಾರ ನಗರದಲ್ಲಿ ಜಂಟಿ ಸಭೆ ನಡೆಸಿ ಮಹತ್ವದ ನಿರ್ಣಯ ಕೈಗೊಂಡರೂ, ಪ್ರಚಾರ ಸಮಿತಿ ಅಧ್ಯಕ್ಷರನ್ನು ಆಹ್ವಾನಿಸದೆ ದೂರ ಇಟ್ಟಿರುವುದು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೆ ಬೆಳಕಿಗೆ ಬರುತ್ತಿದೆ. 

Advertisement

ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ಕಾಂಗ್ರೆಸ್‌ನಲ್ಲಿ ಪ್ರತ್ಯೇಕ ಚುನಾವಣಾ ಪ್ರಚಾರ ಸಮಿತಿಯನ್ನೇ ರಚನೆ ಮಾಡಲಾಗಿದ್ದು, ಆ ಸಮಿತಿಗೆ ಮಾಜಿ ಸಚಿವ, ಪಕ್ಷದ ಹಿರಿಯ ಮುಖಂಡ ಎಚ್‌.ಕೆ.ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ರಾಜ್ಯದಲ್ಲಿ ಕೈಗೊಳ್ಳುವ ಚುನಾವಣಾ ಪ್ರಚಾರ ಕಾರ್ಯಕ್ರಮ ಹಾಗೂ ಜಿಲ್ಲಾಮಟ್ಟದಲ್ಲಿ ನಡೆಯುವ ಪರಿವರ್ತನಾ ಸಮಾವೇಶಗಳನ್ನು ನಡೆಸುವ ಕುರಿತಂತೆಯೂ ಪ್ರಚಾರ ಸಮಿತಿ ಅಧ್ಯಕ್ಷರ ಗಮನಕ್ಕೆ ತಾರದೇ ಎಲ್ಲ ನಿರ್ಧಾರಗಳನ್ನು
ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎಚ್‌.ಕೆ. ಪಾಟೀಲರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next