Advertisement

ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ನಿಖಿಲ್ ಯುವ ಘಟಕಕ್ಕೆ ಸಾರಥಿ

10:02 AM Jul 05, 2019 | Nagendra Trasi |

ಬೆಂಗಳೂರು:ನಿರೀಕ್ಷೆಯಂತೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರನ್ನಾಗಿ,ಮಧು ಬಂಗಾರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.

Advertisement

ಏತನ್ಮಧ್ಯೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರ ಸ್ವಾಮಿ ಹೆಸರನ್ನು ಘೋಷಿಸಲಾಯಿತು. ಜೆಪಿ ಭವನದಲ್ಲಿ ಎಚ್.ಡಿ.ದೇವೇಗೌಡರು ಹೆಸರನ್ನು ಘೋಷಿಸಿ, ನಿಖಿಲ್ ಕುಮಾರಸ್ವಾಮಿಗೆ ಹಾರ ಹಾಕಿ ಶುಭಹಾರೈಸಿದರು.

ನಿರ್ಗಮಿತ ಅಧ್ಯಕ್ಷ ಎಚ್. ವಿಶ್ವನಾಥ್ ಅವರು ನೂತನ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next