Advertisement

ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ್‌ ರಾಜೀನಾಮೆ

10:02 AM May 25, 2019 | Team Udayavani |

ಹುಬ್ಬಳ್ಳಿ: ಲೋಕಸಭಾ ಚುನಾವಣಾ ಫ‌ಲಿತಾಂಶದಲ್ಲಿ ಕಾಂಗ್ರೆಸ್‌ ಹೀನಾಯ ನಿರ್ವಹಣೆ ತೋರಿದ ಬೆನ್ನಲ್ಲೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಜನರ ತೀರ್ಪಿಗೆ ನಾವು ತಲೆಬಾಗಲೇಬೇಕು. ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನುಸಂಘಟಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸೋಲಿಗೆ ಮೈತ್ರಿ ಮಾಡಿಕೊಂಡಿರುವುದು ಕಾರಣವಾಗಿರಲೂ ಬಹುದು. ಅದೇ ಮುಖ್ಯ ಕಾರಣ ಎನ್ನಾಲಾಗುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next