Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾರಾಷ್ಟ್ರ ಉಸ್ತುವಾರಿ ಹುದ್ದೆ ತಮಗೆ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆಗಳು.ಪಕ್ಷ ಗಟ್ಟಿಗೊಳಿಸಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ಮಾರ್ಗದರ್ಶನವಿದೆ ಎಂದು ತಿಳಿಸಿದರು.
Related Articles
Advertisement
ಇದೇ ಸಂದರ್ಭದಲ್ಲಿ ಡ್ರಗ್ ಮಾಫಿಯಾದಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಆರೋಪವನ್ನು ತಳ್ಳಿಹಾಕಿದ ಅವರು, ಜಮೀರ್ ಅಹ್ಮದ್ ಖಾನ್ ವಿರುದ್ಧದ ಆರೋಪ ಸಾಬೀತಾದರೆ ಪೂರ್ತಿ ಆಸ್ತಿಯನ್ನೇ ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ ಎಂದು ಜಮೀರ್ ಅಹಮದ್ ಖಾನರನ್ನು ಸಮರ್ಥಿಸಿಕೊಂಡರು.
ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಬಿಐಇಸಿಯನ್ನು ಮುಚ್ಚುವ ಪ್ರಯತ್ನ ಸರ್ಕಾರ ನಡೆಸಿದೆ.ಇದಕ್ಕೆ ತಾವೇ ಮೊದಲ ದೂರುದಾರನಾಗಿದ್ದು, ಸರ್ಕಾರದ ಕೊರೊನಾ ಹಗರಣ ವಿರುದ್ಧ ದೂರಿದ್ದೇನೆ.
ಕೊರೊನಾದಿಂದ ಮೃತಪಟ್ಟವರನ್ನು ಅಮಾನವೀಯವಾಗಿ ನಡೆದುಕೊಳ್ಳುವುದರ ವಿರುದ್ಧ ಮತ್ತು ಆಸ್ಪತ್ರೆಯಲ್ಲಿ ಕೊರೊನಾಸೋಂಕಿತರೊಂದಿಗೆ ನಡೆದುಕೊಳ್ಳುತ್ತಿರುವ ದುರ್ವರ್ತನೆ ಖಂಡಿಸಿ ಮಾನವ ಹಕ್ಕುಗಳ ಆಯೋಗದ ಗಮನಕ್ಕೂ ತರಲಾಗಿದೆ.
ಕೊರೊನಾದಿಂದ ನಿಜವಾಗಿಯೂ ತಪಟ್ಟವರೆಷ್ಟು ಎಂಬ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಚುರುಕಾಗಿ ಕೆಲಸ ಮಾಡಬೇಕು. ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚಾಗಿದೆ. ರಾಜ್ಯ ಸರ್ಕಾರದ ಕೊರೊನಾ ಅಂಕಿ ಸಂಖ್ಯೆಗಳು ಕುತೂಹಲ ಮೂಡಿಸಿದೆ. ಶ್ವಾಸಕೋಶದ ಸಮಸ್ಯೆಗಳಿಂದಲೇ ಶೇ.8.5 ರಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರದ ಈ ಅಂಕಿಅಂಶ ಸತ್ಯಕ್ಕೆ ದೂರವಾಗಿದ್ದು, ಸರ್ಕಾರ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿದರು.