Advertisement
ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದರು.
ತಾಯಂದಿರ ಮರಣ ಪ್ರಕರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ದೇಶಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷ ಮಹಿಳೆಯರಲ್ಲಿ 69 ಮರಣ ಸಂಭವಿಸುತ್ತಿದ್ದು, ದೇಶದಲ್ಲಿ ಈ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು. ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಔಷಧ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
Related Articles
Advertisement
ಹೆಣ್ಣು ಭ್ರೂಣ ಹತ್ಯೆ ತಡೆಯಿರಿಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವತ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 “ನಮ್ಮ ಕ್ಲಿನಿಕ್’ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಡಿ ಚಿಕಿತ್ಸಾ ಪ್ಯಾಕೇಜ್ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು ಎಂದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಉಸಿರಾಟ ಸಂಬಂಧಿ ಕಾಯಿಲೆ ಬಗ್ಗೆ ಕಟ್ಟೆಚ್ಚರ: ಕೇಂದ್ರ ಸೂಚನೆ
ಹೊಸದಿಲ್ಲಿ: ದೇಶದಲ್ಲಿ ಎಚ್‌ಎಂಪಿ ವೈರಸ್ ಸೋಂಕು ಮತ್ತಿಬ್ಬರು ಮಕ್ಕಳಲ್ಲಿ ಕಂಡು ಬಂದಿದ್ದು, ಈ ಮೂಲಕ ಸೋಂಕುಪೀಡಿತರ ಸಂಖ್ಯೆ 7ಕ್ಕೆ ಏರಿದೆ. ಎಚ್‌ಎಂಪಿ ವೈರಸ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರಕಾರವು ಉಸಿರಾಟ ಸಂಬಂಧಿ ಸೋಂಕುಗಳು ಬಗ್ಗೆ ನಿಗಾ ಇಡುವಂತೆ ಎಲ್ಲ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಮಂಗಳವಾರ ನಾಗಪುರದ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿ ಪುಣ್ಯ ಸಲಿಲ್ ಶ್ರೀವಾಸ್ತವ್ ಅವರು ಎಲ್ಲ ರಾಜ್ಯದ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದು ಸಾರಿ, ಐಎಲ್‌ಐ, ಎಚ್‌ಎಂಪಿವಿ ಸಹಿತ ಎಲ್ಲ ಉಸಿರಾಟ ಸಂಬಂಧಿ ಕಾಯಿಲೆಗಳ ಬಗ್ಗೆ ನಿಗಾ ಇರಿಸುವಂತೆ ಸೂಚನೆ ನೀಡಿದ್ದಾರೆ.