Advertisement

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

05:20 PM Jan 06, 2025 | Team Udayavani |

ಬೆಂಗಳೂರು: ರಾಜ್ಯದಲ್ಲಿ HMPV ವೈರಸ್ ನ ಎರಡು ಪ್ರಕರಣಗಳು ಧೃಡ ಪಟ್ಟ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ(ಜ6) ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ ”ಕರ್ನಾಟಕದಲ್ಲಿ HMPV/ ಚೀನಾ ವೈರಸ್ ಸೋಂಕಿನ ಬಗ್ಗೆ ಮಾಹಿತಿ ಇದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೂ ಮಾತನಾಡಿದ್ದೇನೆ. ಇದನ್ನು ನಿಯಂತ್ರಿಸಲು ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಅಪಾಯಕಾರಿ ವೈರಸ್ ಅಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.ಆರೋಗ್ಯ ಇಲಾಖೆ ಯಾವುದೇ ಕ್ರಮಗಳನ್ನು ಸೂಚಿಸಿದರೂ, ಸರ್ಕಾರವು ಆ ಎಲ್ಲಾ ಕ್ರಮಗಳನ್ನು ಬೆಂಬಲಿಸುತ್ತದೆ” ಎಂದು ಸಿಎಂ ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಬಹು ಉಸಿರಾಟದ ವೈರಲ್ ರೋಗಕಾರಕ ಎರಡು HMPV ಪ್ರಕರಣಗಳನ್ನು ಕರ್ನಾಟಕದಲ್ಲಿ ಪತ್ತೆಹಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಭಯಪಡುವ ಅಗತ್ಯವಿಲ್ಲ, ಎಚ್‌ಎಂಪಿವಿ ಕೋವಿಡ್‌ನಂತೆ ಹರಡುವುದಿಲ್ಲ

Advertisement

ಜನರು ಭಯಪಡಬೇಡಿ, ಏಕೆಂದರೆ ವೈರಸ್ ಕೋವಿಡ್ -19 ರಂತೆ ಹರಡುವುದಿಲ್ಲ.ಉಸಿರಾಟದ ವೈರಸ್ ಪ್ರಾಥಮಿಕವಾಗಿ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ನೆಗಡಿಯಂತೆಯೇ ಸೋಂಕುಗಳನ್ನು ಉಂಟುಮಾಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ (DME) ಪ್ರಕಟಣೆಯಲ್ಲಿ ಒತ್ತಿಹೇಳಿದೆ. ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಮತ್ತು ತೀವ್ರತರವಾದ ಉಸಿರಾಟದ ಸೋಂಕು (SARI) ವರದಿ ಮಾಡಲು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next