Advertisement
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಚೀನದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾವೋ ನಿಂಗ್, ವಿದೇಶಿಯರು ಪ್ರವಾಸ ಕೈಗೊಳ್ಳಲು ಚೀನ ಸುರಕ್ಷಿತವಾಗಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳ ಬಗ್ಗೆ ಮುಂಜಾಗ್ರತೆ ಕೈಗೊಳ್ಳುವ ಸಂಬಂಧ ಚೀನದ ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆ ಆಡಳಿತ ನೀಡಿರುವ ಸಲಹೆಗಳನ್ನು ಇದೇ ವೇಳೆ ಉಲ್ಲೇಖೀಸಿದರು.ಕೆಲವು ದಿನಗಳಿಂದ ಚೀನದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚೀನ ಸರಕಾರ ಈ ಸ್ಪಷ್ಟನೆ ನೀಡಿದೆ. ವಿಶೇಷವಾಗಿ ಭಾರತ ಮತ್ತು ಇಂಡೋನೇಷ್ಯಾಗಳಲ್ಲಿ ಈ ಬಗ್ಗೆ ವ್ಯಾಪಕ ಸುದ್ದಿ ಹರಡಿತ್ತು. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಇನ್ನಷ್ಟೇ ಹೇಳಿಕೆಯನ್ನು ನೀಡಬೇಕಿದೆ.