Advertisement

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

12:50 AM Oct 18, 2024 | Team Udayavani |

ಬೆಂಗಳೂರು: ಹಿಂದೂಸ್ಥಾನ್‌ ಮಶಿನ್‌ ಆ್ಯಂಡ್‌ ಟೂಲ್ಸ್‌ (ಎಚ್‌ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್‌) ವಿಷಯದಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.

Advertisement

ಗುರುವಾರ ಜೆಡಿಎಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಸಭೆಯಲ್ಲಿ ಎಲ್ಲ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲ ದಾಖಲೆ ಸಮೇತ ಚರ್ಚೆ ಮಾಡೋಣ ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next