Advertisement

ಮನೆಯಂಗಳದಲ್ಲಿ ರಾಷ್ಟ್ರಧ್ವಜ ಹಾರಿಸಿ

06:20 PM Aug 04, 2022 | Team Udayavani |

ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ ಅಂಗವಾಗಿ ಹರ್‌ ಘರ್‌ ತಿರಂಗಾ ಅಭಿಯಾನದ ಹಿನ್ನಲೆಯಲ್ಲಿ ಮನೆ ಮನೆಯಲ್ಲೂ ರಾಷ್ಟ್ರೀಯ ಧ್ವಜ ಅಭಿಯಾನವನ್ನು ಆ. 13ರಿಂದ ಆ.15ರವರೆಗೆ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

Advertisement

ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ “ಹರ್‌ ಘರ್‌ ತಿರಂಗಾ’ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್‌ 13ರಿಂದ 15ರವರೆಗೆ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ವಿಜಯನಗರ ಜಿಲ್ಲೆಯ ಪ್ರತಿ ಗ್ರಾಮದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಪುರಸಭೆ ಹಾಗೂ ನಗರಸಭೆ ಕಚೇರಿಗಳನ್ನು ರಾಷ್ಟ್ರಧ್ವಜಗಳ ಮಾರಾಟ ಕೇಂದ್ರಗಳನ್ನಾಗಿ ಗುರುತಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಸರ್ಕಾರ ನಿಗಪಡಿಸಿರುವ ದರದಲ್ಲಿ ರಾಷ್ಟ್ರಧ್ವಜಗಳನ್ನು ಭಾರತ ಸರ್ಕಾರದ ಗೃಹ ವ್ಯವಹಾರಗಳ ಮಂತ್ರಾಲಯದ ದಿ-ಫ್ಲಾಗ್‌ ಕೋಡ್‌ ಆಫ್‌ ಇಂಡಿಯಾ-2022 (ತಿದ್ದುಪಡಿ-2021) ಅನುಸರಿಸಿ ತಮ್ಮ ತಮ್ಮ ಮನೆಯ ಅಂಗಳದಲ್ಲಿ ಧ್ವಜವನ್ನು ಹಾರಿಸಿ “ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸಮಸ್ತ ಸಾರ್ವಜನಿಕರಲ್ಲಿ ಜಿಲ್ಲಾ ಧಿಕಾರಿಗಳು ಕೋರಿದ್ದಾರೆ.

ಈ ಅಭಿಯಾನ ಮುಕ್ತಾಯವಾದ ನಂತರ ರಾಷ್ಟ್ರಧ್ವಜವನ್ನು ತಮ್ಮ ಮನೆಯಲ್ಲಿ ಸುರಕ್ಷಿತವಾಗಿ ಕಾಯ್ದಿರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಹರ್‌ ಘರ್‌ ತಿರಂಗಾ ಅಭಿಯಾನವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಮತ್ತು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅವರು ವಿವರಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next