ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರಕಾರ ಆ.11ರಿಂದ 17ರ ವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚಿಸಿ ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ದೇಶದ ಮನೆಮನೆ ಯಲ್ಲೂ ರಾಷ್ಟ್ರಧjಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ಕೊಡಲಾಗಿದೆ. ಜತೆಗೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ವಿಶ್ವವಿದ್ಯಾನಿಲಯಗಳು, ಇಲಾಖೆ ವ್ಯಾಪ್ತಿಯ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಲ್ಲೂ ಧ್ವಜ ಹಾರಿಸಬೇಕಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಬೋಧಕರು, ಬೋಧಕೇತ ರರು, ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಗಳ ವಾಹನ ಚಾಲಕರನ್ನು ಪ್ರೇರೇಪಿಸಬೇಕು. ಕೇಂದ್ರ ಸರಕಾರದ amritmahotsav.nic.in ಜಾಲತಾಣದಲ್ಲಿರುವ ಬ್ಯಾನರ್ ಮತ್ತು ಪೋಸ್ಟರ್‌ಗಳ ಮಾದರಿಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.