Advertisement
ಮತದಾನದಲ್ಲಿ ಭಾಗವಹಿಸು ವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆ. ಪ್ರತಿ ಮತದಾರನು ತನ್ನ ಮತದ ಮೌಲ್ಯವನ್ನು ಅರಿತು ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವಂತಾಗಲಿ ಎಂಬುದೇ ಚುನಾವಣ ಆಯೋಗದ ಆಶಯ. ಸಾರ್ವಜನಿಕರನ್ನು ಮತದಾನಕ್ಕೆ ಪ್ರೇರೇಪಿಸಲು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಗ ಹಮ್ಮಿಕೊಂಡಿದೆ. ಅದಕ್ಕೆ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮ ಹೊಸ ಸೇರ್ಪಡೆಯಾಗಿದೆ.ಕಾರ್ಯಕ್ರಮದಂದು “ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ” ಎಂಬ ಧ್ಯೇಯವಾಕ್ಯ ಒಳಗೊಂಡಿರುವ ಬಾವುಟವನ್ನು ಮತಗಟ್ಟೆಯಲ್ಲಿ ಹಾರಿಸಲಾಗುತ್ತದೆ. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾಲ್ನಡಿಗೆ ಜಾಥಾ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.