Advertisement
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆ ಅಥವಾ ಪ್ರವಾಹದಿಂದ ಹಾನಿಗೀಡಾದ ಮನೆಗಳ ಪಟ್ಟಿಯನ್ನು ಜು. 31ರೊಳಗೆ ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ತಾ.ಪಂ.ಗಳ ಇಒಗಳು ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚನೆ ನೀಡಿದರು.
Related Articles
ಡೀಮ್ಡ್ ಅರಣ್ಯ ವ್ಯಾಪ್ತಿಯಿಂದ ಕಂದಾಯ ಇಲಾಖೆಗೆ ವಾಪಸ್ ಆಗುವ ಭೂಮಿಯನ್ನು ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಅರಣ್ಯ ಅಧಿಕಾರಿಗಳು ಪರಸ್ಪರ ಚರ್ಚಿಸಿ, ಯಾವ ಯಾವ ಸರ್ವೇ ನಂಬರುಗಳು ಡೀಮ್ಡ್ ಅರಣ್ಯದಿಂದ ಕಂದಾಯ ಇಲಾಖೆಯ ಸುಪರ್ದಿಗೆ ಒಳಪಡುತ್ತವೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಅನಂತರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು, ಈ ವೇಳೆ ಅನಧಿಕೃತ ನಿವೇಶನ ಹೊಂದಿದವರಿಗೆ ಹಕ್ಕು ಪತ್ರ ನೀಡಿದ್ದಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಹಕ್ಕುಪತ್ರ ನೀಡುವುದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮನೆಗೆ ತಹಶೀಲ್ದಾರರು ಕಡ್ಡಾಯವಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲೇಬೇಕು ಹಾಗೂ ಅದನ್ನು ನಿಯಮಾನುಸಾರ ಕಡತದಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.
Advertisement
ಜಿ.ಪಂ. ಸಿಇಒ ಡಾ| ಕುಮಾರ್, ಎಸ್‌ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಎಡಿಸಿ ಕೃಷ್ಣಮೂರ್ತಿ, ಎಸಿ ಮದನ್ ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಕಾರ್ಖಾನೆಗಳು ಹಾಗೂ ಬಾಯ್ಲರ್ ಉಪ ನಿರ್ದೇಶಕ ರಾಜೇಶ್ ಮಿಶ್ರಿಕೋಟೆ, ಕೃಷಿ ಇಲಾಖೆಯ ಉಪ ನಿರ್ದೇಶಕಿ ಭಾರತಮ್ಮ, ಬಾಳ ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳು, ಎಂಆರ್‌ಪಿಎಲ್ ಅಧಿಕಾರಿಗಳು ಮೊದಲಾದವರು ಭಾಗವಹಿಸಿದ್ದರು.