Advertisement

ಗ್ರಾಮೀಣ ಭಾಗದಲ್ಲೂ ಕೋವಿಡ್ ಕಾಟ

01:00 PM Jul 10, 2020 | Naveen |

ಹೊಳಲ್ಕೆರೆ: ತಾಲೂಕಿನ ದೊಗ್ಗನಾಳ್‌ ಹಾಗೂ ಆರ್‌. ಗೊಲ್ಲರಹಳ್ಳಿಯಲ್ಲಿ ಕೋವಿಡ್‌-19 ವೈರಸ್‌ ಪತ್ತೆಯಾಗಿದ್ದು, ಇದೇ ಮೊದಲ ಬಾರಿ ತಾಲೂಕಿನ ಇಬ್ಬರಲ್ಲಿ ಸೋಂಕು ದೃಢಪಟ್ಟಿರುವುದರಿಂದ ಜನರು ಆತಂಕಗೊಂಡಿದ್ದಾರೆ.

Advertisement

ದೊಗ್ಗನಾಳ್‌ ಗ್ರಾಮದ ಕೋವಿಡ್ ಸೋಂಕಿತ, ಚನ್ನಗಿರಿ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ದಾವಣಗೆರೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೊಗ್ಗನಾಳ್‌ ಗ್ರಾಮದಿಂದ ನಿತ್ಯ ಗರಗ ಗ್ರಾಮಕ್ಕೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 25 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಅವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಿ ರಸ್ತೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಆರ್‌. ಗೊಲ್ಲರಹಳ್ಳಿಯ ವ್ಯಕ್ತಿ ಬೆಂಗಳೂರಿನಲ್ಲಿ ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿದ್ದು, ಸ್ವಗ್ರಾಮಕ್ಕೆ ಆಗಮಿಸಿದ್ದರು. ಹಾಗಾಗಿ ಎನ್‌.ಜಿ. ಹಳ್ಳಿ ಹಾಗೂ ರಾಮಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಟಲು ದ್ರವ ಪಡೆದುಕೊಂಡು ಪರೀಕ್ಷೆ ನಡೆಸಲಾಗಿತ್ತು. ವರದಿ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು ಹಾಗೂ ಅಕ್ಕಪಕ್ಕದ ಮನೆಯ 25 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ತಹಶೀಲ್ದಾರ್‌ ಕೆ. ನಾಗರಾಜ್‌, ಡಿಎಚ್‌ಒ ಡಾ| ಜಯಸಿಂಹ ಎರಡು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next