ಹೊಳಲ್ಕೆರೆ : ಇತ್ತೀಚೆಗೆ ಸುರಿದ ಮಳೆಯಿಂದ ಗೊಡೆಗಳು ಹಸಿಯಾಗಿದ್ದ ಪರಿಣಾಮ ಮನೆಯ ಗೋಡೆಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳ್ ಗ್ರಾಮದಲ್ಲಿ ಸಂಭವಿಸಿದೆ.
ಇತ್ತೀಚೆಗೆ ಹಲವಾರು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಮನೆಯ ಗೋಡೆಯೊಳಗೆ ನೀರು ಹೋದ ಪರಿಣಾಮ ಗೋಡೆ ಸಂಪೂರ್ಣವಾಗಿ ಹಸಿಯಾಗಿ ದಿಢೀರ್ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಹಲವಾರು ಮನೆಗಳ ಗೋಡೆಗಳು ಮಳೆಗೆ ಹಸಿಯಾಗಿದ್ದು ನೆಲಕ್ಕೆ ಉರುಳುವ ಸಾಧ್ಯತೆಯಿದ್ದು ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಹಾಗಾಗಿ ಸ್ಥಳಕ್ಕೆ ತಾಲೂಕು ಆಡಳಿತ ಭೇಟಿ ನೀಡಬೇಕು. ಮನೆಗಳನ್ನು ಪರಿಶೀಲಿಸಿ ದುರಸ್ತಿಗೊಳಿಸಲು ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇನ್ನು ಹಲವಾರು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವಾರು ವರ್ಷಗಳ ಹಿಂದೆ ಕಟ್ಟಿದ ಮನೆಗಳು ಶಿಥಿಲಗೊಂಡಿವೆ .ಹಾಗಾಗಿ ತಾಲೂಕು ಆಡಳಿತ ಸ್ಥಳಕ್ಕೆ ಭೇಟಿ ನೀಡಿ, ಶಿಥಿಲಗೊಂಡ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡರಾದ ಧೋತಿ ಗೋವಿಂದಪ್ಪ, ಕುಮಾರಸ್ವಾಮಿ ಸೇರಿದಂತೆ ಹಲವಾರು ಜನರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬ್ಯಾಂಡ್‌ನೊಂದಿಗೆ ಎತ್ತಿನ ಗಾಡಿಯಲ್ಲಿ ಮಾಹಿತಿ ಒಯ್ದ ಆರ್‌ಟಿಐ ಕಾರ್ಯಕರ್ತ!