ಹೊಳಲ್ಕೆರೆ: ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ಘಟನೆ ಶುಕ್ರವಾರ ನಡೆದಿದೆ.
Advertisement
ತಾಲೂಕಿನ ಗೊಲ್ಲರಹಳ್ಳಿ ಎಕೆ ಕಾಲೋನಿ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಮಾರಕ್ಕ (61) ಮಧ್ಯಾಹ್ನ 1 ಗಂಟೆಯ ವೇಳೆ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎದುರು ರಸ್ತೆಯಲ್ಲಿ ನಡೆದುಕೊಂಡು ಹೊಗುವ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಯಿಂದ ನಿವೃತ್ತರಾಗಿದ್ದು, ವೇತನ ಮತ್ತಿತರ ಕೆಲಸಕ್ಕೆ ಕಚೇರಿ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಹೊಳಲ್ಕೆರೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದೆ.