Advertisement

ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

01:55 PM Jan 28, 2021 | Team Udayavani |

ನವ ದೆಹಲಿ : ಅಪ್ರಾಪ್ತ ಬಾಲಕಿಯ ಕೈ ಹಿಡಿದು ಪ್ಯಾಂಟ್ ಜಿಪ್ ತೆಗೆಯುವುದು ಪೋಕ್ಸೊ ಅಡಿಯಲ್ಲಿ ಲೈಂಗಿಕ ದೌರ್ಜನ್ಯವಲ್ಲ ಎಂದು ಬಾಂಬೆ ಹೈಕೋರ್ಟ್‌ ನ ನಾಗ್ಪುರ ನ್ಯಾಯಪೀಠವು  ತೀರ್ಪು ನೀಡಿದೆ. ಹಾಗೂ ಈ ಪ್ರಕರಣವನ್ನು ಐಪಿಸಿಯ ಸೆಕ್ಷನ್ 354 ರ ಅಡಿಯಲ್ಲಿ ದಾಖಲಿಸಲಾಗುವುದು ಎಂದು  ತಿಳಿಸಿದೆ.

Advertisement

ಓದಿ : ಎಂಇಎಸ್‌ ನಿಷೇಧಿಸಲು: ವಾಟಾಳ್‌ ಆಗ್ರಹ

ನ್ಯಾಯಮೂರ್ತಿ ಪುಷ್ಪಾ ಗಣೆದಿವಾಲಾ ಅವರ ಏಕ ಸದಸ್ಯ ಪೀಠವು 50 ವರ್ಷದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶವನ್ನು ಹೊರಡಿಸಿದೆ.

ಅಪ್ರಾಪ್ತ ಬಾಲಕಿಯನ್ನು  ತನ್ನ ಕೈಯಲ್ಲಿ ಹಿಡಿದುಕೊಂಡು ಪ್ಯಾಂಟ್ ಜಿಪ್ ತೆರೆಯುವಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ, ವಿಚಾರಣಾ ನ್ಯಾಯಾಲಯವು ಆರೋಪಿಗಳಿಗೆ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಪೋಕ್ಸೊ ಸೆಕ್ಷನ್ 10 ರ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ 25 ಸಾವಿರ ರೂ. ದಂಡವನ್ನು ವಿಧಿಸಬೇಕು ಎಂದು ಆದೇಶ ನೀಡಿದೆ.

Advertisement

ಆದರೇ, ನೇರ ದೈಹಿಕ ಸಂಪರ್ಕ ಅಥವಾ ಸ್ಪರ್ಶಿಸುವುದು, ಸ್ತ್ರೀಯ ಗುಪ್ತಾಂಗವನ್ನು ಪ್ರವೇಶಿಸುವುದನ್ನು “ಲೈಂಗಿಕ ಸಂಪರ್ಕ” ಎಂದು ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ಏಕ ಸದಸ್ಯ ನ್ಯಾಯಪೀಠವು ವಿವರಣೆ ನೀಡಿದೆ.

ಓದಿ :ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಈ ಪ್ರಕರಣವು ಐಪಿಸಿ ಸೆಕ್ಶನ್ 354 ಎ (1) (ಐ) ಅಡಿಯಲ್ಲಿ ಬರುವ ಕಾರಣ ಪೋಕ್ಸೊ ಕಾಯ್ದೆಯ ಸೆಕ್ಷನ್ 8, 10 ಮತ್ತು 12 ರ ಅಡಿಯಲ್ಲಿ ಐದು ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಿ ಐಪಿಸಿಯ ಸೆಕ್ಷನ್ ಆರೋಪಿಯನ್ನು ಮೂರು ವರ್ಷಗಳ ಅವಧಿಗೆ ಜೈಲಿಗೆ ಹಾಕಲಾಗುವುದು ಎಂದು ತೀರ್ಪು ನೀಡಿದೆ.

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹಾಗೂ ನ್ಯಾಯಮೂರ್ತಿ ಎ ಎಸ್ ಬೋಪಣ್ಣ ಮತ್ತು ವಿ. ರಾಮ ಸುಬ್ರಮಣಿಯನ್ ಅವರ ಅಧ್ಯಕ್ಷತೆಯ ನ್ಯಾಯಪೀಠ ಈ ಆದೇಶವನ್ನು ತಡೆಹಿಡಿದಿದೆ. ಸದ್ಯ, ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಜನವರಿ 19 ರಂದು ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಎಜಿಗೆ ಅನುಮತಿ ನೀಡಿದೆ.

 

ಓದಿ :ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ

 

Advertisement

Udayavani is now on Telegram. Click here to join our channel and stay updated with the latest news.

Next