Advertisement
ಜಿಲ್ಲೆಯ ನರಗುಂದ, ರೋಣ ಹಾಗೂ ಮುಂಡರಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೆರೆ ಆತಂಕ ಆವರಿಸಿದೆ. ಕಳೆದ ಎರಡು ದಿನಗಳಿಂದ ಬೆಣ್ಣೆಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ಇದೇ ವೇಳೆ ನವಿಲುತೀರ್ಥ ಜಲಾಶಯದಲ್ಲಿ ಒಳ ಹರಿವು ಹೆಚ್ಚಿದ್ದರಿಂದ ಸುಮಾರು 18 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಬೆಣ್ಣೆಹಳ್ಳದ ನೀರು ನದಿಗೆ ಸೇರಲಾಗದೇ ಹಿಮ್ಮುಖವಾಗುತ್ತಿದೆ. ಪರಿಣಾಮ ಹೊಳೆಆಲೂರು- ಮೆಣಸಗಿ ಸೇತುವೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಅಕ್ಕಪಕ್ಕದ ಜಮೀನುಗಳಿಗೂ ಹಳ್ಳ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಗೀಡಗಿದೆ.
Related Articles
Advertisement