Advertisement

ಕೋವಿಡ್ 2ನೇ ಅಲೆ ಹಿನ್ನೆಲೆ : ವಿಜಯಪುರದಲ್ಲಿ ಹೋಳಿ ಆಚರಣೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

10:07 PM Mar 24, 2021 | Team Udayavani |

ವಿಜಯಪುರ: ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ಜಿಲ್ಲೆಯಲ್ಲಿ ಹೋಳಿ ಹಬ್ಬ ಆಚರಣೆ ನಿಷೇಧಿಸಿ ಜಿಲ್ಲಾಧಿಕಾರಿ ಸುನಿಲಕುಮಾರ ಆದೇಶಿಸಿದ್ದಾರೆ.

Advertisement

ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹಲವೆಡೆ ಹೆಚ್ಚಿನ ಪ್ರಕರಣ ಕಂಡು‌ ಬಂದಿದೆ.
ವಿಜಯಪುರ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿದ್ದು, ಜಿಲ್ಲೆಯಲ್ಲೂ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ವಿವಿಧ ಸಾರ್ವಜನಿಕ ಸಭೆ, ಸಮಾರಂಭ, ಆಚರಣೆಗಳಲ್ಲಿ ಸಾರ್ವಜನಿಕರು ಗುಂಪು, ಗುಂಪಾಗಿ ಸೇರುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಹೋಳಿ ಆಚರಣೆ ಅಸಾಧ್ಯ.

ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಮಾರ್ಚ್ 28 ರಿಂದ 31 ರವರೆಗೆ ನಡೆಯುವ ಹೋಳಿ ಹಬ್ಬವನ್ನು ನಿಷೇಧಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ :ಕೋವಿಡ್ ನಡುವೆ ಸರಳ ಸಂಭ್ರಮದಿಂದ ನಡೆದ ವೈರಮುಡಿ ಉತ್ಸವ

Advertisement

ಸಾಂಕ್ರಾಮಿಕ ರೋಗ ಕಾಯ್ದೆ 1897 ಹಾಗೂ ವಿಪತ್ತು ನಿರ್ವಹಣ ಕಾಯ್ದೆ 2005 ರ ಅನ್ವಯ ಹೋಳಿ ಹಬ್ಬವನ್ನು ನಿಷೇದಿಸಿ ಈ ಆದೇಶ ಹೊರಡಿಸಲಾಗಿದೆ. ಸದರಿ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next