Advertisement

Heavy rain; ಹೆಬ್ರಿ ತಾಲೂಕಿನಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ

08:17 AM Jul 26, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಗಾಳಿ ಮಳೆಯಿಂದ ತರಗತಿ ನಡೆಸಲು ಅನಾನುಕೂಲವಾಗುತ್ತಿದ್ದಲ್ಲಿ, ಅಥವಾ ಮಳೆ ಜೋರಾಗಿದ್ದಲ್ಲಿ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಮತ್ತು ಶಾಲಾ ಪರಿಸ್ಥಿತಿ ನೋಡಿಕೊಂಡು ರಜೆ ನೀಡಲ ಬಿಇಒಗಳಿಗೆ ಕುಂದಾಪುರ ಹಾಗೂ ಬೈಂದೂರಿನ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

Advertisement

ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.26ರ ಶುಕ್ರವಾರ ರಜೆ ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌ ಐ.ಟಿ.ಐ. ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಹೆಬ್ರಿ ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next