Advertisement

ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

10:03 AM Aug 08, 2022 | Team Udayavani |

ಬೆಳಗಾವಿ: ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Advertisement

ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕುಗಳಲ್ಲಿ ಬಿಡದೆ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಕೆ ಘೋಷಣೆ ಮಾಡಲಾಗಿದೆ.

ಚಿರತೆ ಪ್ರತ್ಯಕ್ಷ- ಶಾಲೆಗೆ ರಜೆ: ಬೆಳಗಾವಿ ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ 13 ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಬೆಳಗಾವಿಯ ಜಾಧವ ನಗರದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಕಳೆದ 2 ದಿನಗಳಿಂದಲೂ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಚಿರತೆ ಪತ್ತೆಯಾಗಿಲ್ಲ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು ಮಕ್ಕಳನ್ನು ಹೊರಗೆ ಬಿಡದಂತೆ ತಿಳಿಸಲಾಗಿದೆ.

ಇದನ್ನೂ ಓದಿ:ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ

Advertisement

ಹನುಮಾನ್ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪು ನಗರ ಕಿರಿಯ ಪ್ರಾಥಮಿಕ ಶಾಲೆ, ಸಹ್ಯಾದ್ರಿ ನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಮರಾಠಿ ಕಿರಿಯ ಪ್ರಾಥಮಿಕ ಶಾಲೆ, ವಿವಿ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪುನಗರ ಕೆಎಲ್ಇ ಇಂಟರ್ ನ್ಯಾಶನಲ್ ಸ್ಕೂಲ್, ವನಿತಾ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಕ್ಲಬ್ ರಸ್ತೆ, ಕೇಂದ್ರೀಯ ವಿದ್ಯಾಲಯ, ಕ್ಯಾಂಪ್, ಮರಾಠಿ ವಿದ್ಯಾನಿಕೇತನ, ಕ್ಯಾಂಪ್, ಎನ್ ಪಿ ಇಟಿ ಕ್ಲಬ್ ರಸ್ತೆ ಸೇಂಟ್ ಝೇವಿಯರ್ ಹೈಸ್ಕೂಲ್ ಕ್ಯಾಂಪ್, ಟಿವಿ ಸೆಂಟರ್ ಜಿಎಲ್ ಪಿಎಸ್ ಉರ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅದೇ ರೀತಿ ಬೆಳಗಾವಿ ಗ್ರಾಮೀಣ ಭಾಗದ ಒಂಬತ್ತು ಸರಕಾರಿ ಶಾಲೆಗಳಿಗೆ ಸಹ ರಜೆ ಘೋಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next