ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ಗದಗ ಜಿಲ್ಲಾದ್ಯಂತ ವ್ಯಾಪಕ ಮಳೆ ಬೆನ್ನಲ್ಲೆ ಪ್ರಭಾರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ಆದೇಶವರೆಗೆ ರಜೆ ಘೋಷಣೆ ಮಾಡಲಾಗಿದೆ, ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಆರಂಭವಾದ ಮಳೆಯು ನಿರಂತರವಾಗಿ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ.
ಇದನ್ನೂ ಓದಿ:ಬಲೂಚಿಸ್ತಾನ್ ಬಳಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ – ಆರು ಸೇನಾ ಅಧಿಕಾರಿಗಳು ಸಾವು?
ರಸ್ತೆ ತುಂಬೆಲ್ಲ ನೀರು: ಗದಗ-ಬೆಟಗೇರಿ ಅವಳಿ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಗರದ ಮಹಾತ್ಮಾ ಗಾಂಧಿ ವೃತ್ತ, ತೋಂಟದಾರ್ಯ ಮಠದ ರಥಬೀದಿಯ ಮಹಾದ್ವಾರದ ಬಳಿ, ತಿಲಕ್ ಪಾರ್ಕ್, ಗ್ರೇನ್ ಮಾರುಕಟ್ಟೆ, ಹಳೆ ಜಿಲ್ಲಾಧಿಕಾರಿ ಕಚೇರಿ ವೃತ್ತ, ಝಂಡಾ ಸರ್ಕಲ್ , ಬಳ್ಳಾರಿ ಬ್ರಿಡ್ಜ್ ಸೇರಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ವಾಹನ ಸವಾರರು ಹರಸಾಹಸ ಪಟ್ಟರು.