Advertisement

ಧಾರಾಕಾರ ಮಳೆ : ನಾಳೆ ಕೊಡಗಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ  

06:30 PM Jul 05, 2022 | Team Udayavani |

ಕೊಡಗು : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಬುಧವಾರ ಜಿಲ್ಲೆಯ ಎಲ್ಲಾ  ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌ ಅವರು ಆದೇಶ ಹೊರಡಿಸಿದ್ದಾರೆ.

Advertisement

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು – ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ದಿನಾಂಕ 6-7-2022 ( ಬುಧವಾರ) ಜಿಲ್ಲೆಯ ಎಲ್ಲಾ  ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಹಲವು ಕಡೆ ಮರಗಳು ರಸ್ತೆಗೆ ಉರುಳಿ, ವಿದ್ಯುತ್‌ ಕಂಬಗಳು ಉರುಳಿವೆ. ಅಲ್ಲಲಿ ಬರೆ ಕುಸಿತ ಉಂಟಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next