ಉಡುಪಿ:ಜಿಲ್ಲೆಯಲ್ಲಿ ವರುಣ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಗಳವಾರವೂ ಕೂಡಾ ಉಡುಪಿ, ದಕ್ಷಿಣ ಕನ್ನಡ, ಮಡಿಕೇರಿ ಹಾಗೂ ಉತ್ತರ ಕನ್ನಡದ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
Advertisement
ತೀವ್ರ ಮಳೆಯ ಕಾರಣ ನಾಳೆ (ಆಗಸ್ಟ್ 14,ಮಂಗಳವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿಯು
ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.
ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮುಂಗಾರು ಅಬ್ಬರಿಸುತ್ತಿದ್ದ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಸೋಮವಾರ ರಜೆ ಘೋಷಿಸಿದ್ದರು.