Advertisement

ಭಾರಿ ಮಳೆ : ಆ. 5, 6ರಂದು ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ ರಜೆ

08:01 PM Aug 04, 2022 | Team Udayavani |

ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸ್ತುತ ಸುರಿಯುತ್ತಿರುವ ಮಳೆ ಹಾಗೂ ಮುಂದಿನ ಎರಡು ದಿನಗಳ ಕಾಲ ಅತೀ ಹೆಚ್ಚು ಮಳೆ ಬೀಳುವ ಸಂಭವ ವರದಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಆ. 5 ಮತ್ತು 6 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

Advertisement

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಜಿಲ್ಲಾದ್ಯಂತ ಅತೀ ಹೆಚ್ಚು ಮಳೆ ಬೀಳುವ ಸಂಭವ ಇದೆ ಎಂದು ವರದಿ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾದ್ಯಂತ ಇರುವ ಎಲ್ಲಾ ಅಂಗನವಾಡಿ, ಎಲ್.ಕೆ.ಜಿ, ಯು.ಕೆ.ಜಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆ. 5 ಹಾಗೂ 6ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next