Advertisement

ಸಚಿವ ಚವ್ಹಾಣರಿಂದ ಹೋಮ-ಹವನ

03:29 PM Aug 05, 2020 | Suhan S |

ಬೀದರ: ಕೇಂದ್ರ ಸಚಿವ ಅಮಿತ್‌ ಶಾ ಮತ್ತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಕೋವಿಡ್‌-19ನಿಂದ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಗ್ರಾಮ ಬೋಂತಿಯ ಘಮಸುಬಾಯಿ ತಾಂಡಾದ ಶ್ರೀಸಂತ ಸೇವಾಲಾಲ್‌ ಮಹಾರಾಜರು ಮತ್ತು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದಲ್ಲಿ ಹೋಮ, ಹವನ ಮತ್ತು ವಿಶೇಷ ಪೂಜೆ ನಡೆಸಿದರು.

Advertisement

ರಾಜ್ಯದಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಸಿಎಂ ನಿರಂತರವಾಗಿ ಎಲ್ಲ ಸಚಿವರು, ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಹತ್ತು ಹಲವಾರು ಕ್ರಮಗಳನ್ನು ವಹಿಸಿ ಸತತ ಪ್ರಯತ್ನ ವಹಿಸಿದ್ದಾರೆ. ರಾಜ್ಯದಲ್ಲಿ ಸೋಂಕು ಹರಡದಂತೆ ಕ್ರಮ ವಹಿಸಿದ್ದರು. ಈ ಸಂದರ್ಭದಲ್ಲಿ ಎದುರಾದ ಎಲ್ಲ ಸವಾಲುಗಳನ್ನು ಸಿಎಂ ಎಲ್ಲ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸೇರಿ ಸಮರ್ಥವಾಗಿ ಎದುರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಿಎಂ ಯಡಿಯೂರಪ್ಪ ಕೋವಿಡ್‌ನಿಂದ ಬೇಗ ಗುಣಮುಖರಾಗಬೇಕು ಎಂದು ಸಚಿವ ಪ್ರಭು ಚವ್ಹಾಣ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next