ಭಟ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ರಂಗೀಕಟ್ಟೆಯಲ್ಲಿ ನಡೆದಿದೆ.
ರಂಗೀಕಟ್ಟೆಯಲ್ಲಿರುವ ಬಾಷಾ ದಾಮದಾ ಅವರ ಮನೆಯಲ್ಲಿ ಬೆಳಿಗ್ಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಮನೆಯಲ್ಲಿದ್ದ ಮಹಿಳೆಯರು, ಮಕ್ಕಳು ಹೊರಕ್ಕೆ ಬರಲು ಹರಸಾಹಸ ಪಡಬೇಕಾಯಿತು. ಮನೆಯಲ್ಲಿದ್ದರು ಅಪಾಯದಿಂದ ಪಾರಾಗಿದ್ದು, ಚಿಕ್ಕ ಮಗುವೊಂದಕ್ಕೆ ಚಿಕ್ಕಪುಟ್ಟ ಗಾಯವಾಗಿದ್ದು ತಕ್ಷಣ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು.
ಇದನ್ನೂ ಓದಿ:ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
Related Articles
ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.