Advertisement

ನಾಳೆಯಿಂದ “ಮನೆ ಮನೆಗೆ ಕಾಂಗ್ರೆಸ್‌’ಕಾರ್ಯಕ್ರಮ: ಪರಂ

08:56 AM Sep 22, 2017 | |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ಕೊಂಡು ಈಗಿನಿಂದಲೇ ಮತದಾರರೊಂದಿಗೆ ನೇರ ಸಂಪರ್ಕ ಇಟ್ಟುಕೊಳ್ಳಲು “ಮನೆ ಮನೆಗೆ ಕಾಂಗ್ರೆಸ್‌’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್‌ 23ರಂದು ಅಧಿಕೃತ ಚಾಲನೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಹದೇವ ಪುರ ವಿಧಾನಸಭಾ ಕ್ಷೇತ್ರದಿಂದ ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ರಾಜ್ಯದ 224 ಕ್ಷೇತ್ರಗಳಲ್ಲಿಯೂ ಏಕ ಕಾಲಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 15 ರೊಳಗೆ ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ತಲುಪಬೇಕು. ಅದರ ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ 4 ವರ್ಷದಲ್ಲಿ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಈಗ ಅವುಗಳನ್ನು ಜನರಿಗೆ ತಲುಪಿರುವ ಬಗ್ಗೆ ಮಾಹಿತಿ ಪಡೆಯಲು ಬೂತ್‌ ಮಟ್ಟದಿಂದಲೇ ಜನರಿಂದ ಮಾಹಿತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ಕಾಂಗ್ರೆಸ್‌ ರಾಜ್ಯದ 224 ಕ್ಷೇತ್ರಗಳಲ್ಲಿ  54,246 ಬೂತ್‌ಗಳಿಗೆ ಪ್ರತಿ ಬೂತ್‌ ನಲ್ಲಿಯೂ 13ರ ರಿಂದ 20 ಜನರ ಸಮಿತಿ ರಚಿಸಲಾಗಿದೆ. ಪ್ರತಿ ಬೂತ್‌ಗೂ ಅಧ್ಯಕ್ಷ ಹಾಗೂ ಬೂತ್‌ ಮಟ್ಟದ ಏಜೆಂಟ್‌ ಇರಲಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೂತ್‌ ಲೆವೆಲ್‌ ಏಜೆಂಟರನ್ನು ನೇಮಿಸಲಾಗಿದೆ. ರಾಜ್ಯದಲ್ಲಿ 6.5 ಲಕ್ಷ ಬೂತ್‌ ಮಟ್ಟದ ಕಾರ್ಯಕರ್ತರಿದ್ದಾರೆ. ಅವರೆಲ್ಲರ
ಪೂರ್ವಾಪರ ದಾಖಲೆಗಳನ್ನು ಪಕ್ಷ ಸಂಗ್ರಹಿಸಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next