ವಿದ್ಯಾನಗರ: ಗಾತ್ರ ಯಾವುದೇ ಇರಲಿ ಉತ್ತಮ ಸಂಸ್ಕಾರ ಸಂಸ್ಕೃತಿಯಿಂದ ಮನೆಯೇ ದೇವಾಲಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖೀಲಭಾರತ ಕುಟುಂಬದ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅಭಿಪ್ರಾಯ ಪಟ್ಟರು.
ಬದಿಯಡ್ಕ ಸಮೀಪದ ಗೋಳಿಯಡ್ಕದಲ್ಲಿ 4 ವರ್ಷಗಳಿಂದ ನೀರಿನ ಟ್ಯಾಂಕಿನ ಅಡಿಯಲ್ಲಿ ವಾಸಿಸುತ್ತಿದ್ದ ಸುಂದರ ಹಾಗೂ ಕುಟುಂಬಕ್ಕೆ ಸೇವಾಭಾರತಿ ಬದಿಯಡ್ಕ ಹಾಗೂ ಅಭಯ ಸೇವಾನಿಧಿ ಬದಿಯಡ್ಕ ಇದರ ನೇತೃತ್ವದಲ್ಲಿ ನಿರ್ಮಿಸಲಾದ ಮನೆಯ ಪ್ರವೇಶ ಸಂದರ್ಭದಲ್ಲಿ ಮಂಗಲನಿಧಿ ಕಾರ್ಯಕ್ರಮವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮನೆಯೇ ಆದರಾಲಯ, ವಿದ್ಯಾಲಯ, ಸೇವಾಲಯವೆಂಬ ಕಲ್ಪನೆಯೊಂದಿಗೆ ಮಕ್ಕಳನ್ನು ಬೆಳೆಸಿದಾಗ ನಮ್ಮ ಕನಸು ನನಸಾಗುತ್ತದೆ ಎಂದರು.
ಧಾರ್ಮಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಉತ್ತಮ ಚಿಂತನೆಗಳಿಗೆ ದೇವರ ಸಹಾಯ ಇದ್ದೇ ಇದೆ ಎಂದರು. ವೇದಮೂರ್ತಿ ಎಸ್.ಎಂ.ಉಡುಪ ಗಣಪತಿ ಹೋಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘ ಚಾಲಕ್ ಬಿ.ಗೋಪಾಲ ಚೆಟ್ಟಿಯಾರ್ ಪೆರ್ಲ, ಬದಿಯಡ್ಕ ತಾಲೂಕು ಸಂಘ ಚಾಲಕ್ ಗುಣಾಜೆ ಶಿವಶಂಕರ ಭಟ್, ಬ್ಲೋಕ್ ಪಂಚಾಯತು ಸದಸ್ಯೆ ಅಶ್ವಿನಿ ಮಲ್ಲಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.
ವರದಿ: ವಿದ್ಯಾಗಣೇಶ್ ಅಣಂಗೂರು