Advertisement

ಹೋಮ್‌ ಐಸೋಲೇಶನ್‌ ಸೋಂಕಿತರ ನಿಗಾ: ಸಚಿವ ಡಾ|ಕೆ. ಸುಧಾಕರ್‌

11:17 PM Jan 28, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹೋಮ್‌ ಐಸೋಲೇಶನ್‌ನಲ್ಲಿರುವ ಸೋಂಕಿತ ಚಿಕಿತ್ಸೆಗೆ ಹೆಚ್ಚಿನ ಗಮನ ನೀಡುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದರು.

Advertisement

ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರ ಜತೆಗೆ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಅವರ ವೀಡಿಯೋ ಸಂವಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಹೋಂ ಐಸೋಲೇಶನ್‌ ನಲ್ಲಿರುವವರ ಮೇಲೆ ಹೆಚ್ಚು ನಿಗಾ, ಇ-ಸಂಜೀವಿನಿಯಲ್ಲಿ ಎರಡನೇ ಸ್ಥಾನದಲ್ಲಿರುವುದು, ಅದಕ್ಕೂ ಹೆಚ್ಚಾಗಿ ಆಪ್ತಮಿತ್ರ ಮೂಲಕ ಟೆಲಿ ಟ್ರಯಾಜಿಂಗ್‌ ಮೊದಲಾದ ಮಾಹಿತಿಗಳನ್ನು ಅವರು ಪಡೆದಿದ್ದಾರೆ. ಬಹಳ ಯಶಸ್ವಿಯಾಗಿ ದೂರವಾಣಿ ಮೂಲಕ ನಿರ್ವಹಣೆ ಮಾಡುತ್ತಿರುವುದು ವಿಶೇಷವಾಗಿದೆ. ಶೇ. 95ರಷ್ಟು ಸೋಂಕಿತರು ಮನೆಯಲ್ಲಿದ್ದರೂ ಆತಂಕವಿಲ್ಲ. ಶೇ. 4ರಷ್ಟು ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ರಾಜ್ಯದಲ್ಲಿ ಮರಣ ಪ್ರಮಾಣ ಹೆಚ್ಚಾಗುತ್ತಿಲ್ಲ. ಪ್ರಸ್ತುತ ಮರಣ ಪ್ರಮಾಣ ಶೇ. 0.55ಇದೆ. ಸಹ ಅಸ್ವಸ್ಥತೆ ಸೇರಿದಂತೆ ಸಾವಿಗೆ ಹಲವು ಕಾರಣಗಳಿವೆ. ಇದಕ್ಕಾಗಿ ಡೆತ್‌ ಆಡಿಟ್‌ ನಡೆಸಲಾಗುತ್ತಿದೆ. ಸಂಪೂರ್ಣ ವರದಿಯ ಸಹ ಲಭ್ಯವಿದೆ.

ಇನ್ನೂ ಕೋವಿಡ್‌ ನಿಯಮಾವಳಿ ಸಡಿಲಿಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸಿಎಂ ನೇತೃತ್ವದಲ್ಲಿ ಸಭೆ ನಡೆದ ಬಳಿಕವಷ್ಟೇ ಮುಂದಿನ ನಿರ್ಧಾರ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next