Advertisement
ರಾಜ್ಯದ ಶಾಲಾ ಮಕ್ಕಳಿಗೆ ಚಂದನವಾಹಿನಿ ಮೂಲಕ ಬೋಧನೆ ಮಾಡುವ ಸೇತುಬಂಧ ವೇಳಾ ಪಟ್ಟಿಯನ್ನು ಈಗಾಗಲೇ ಪ್ರಕಟಿಸ ಲಾಗಿದ್ದು, 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋಧನೆ ಪ್ರಾರಂಭವಾಗಿದೆ. ಇದೀಗ 1ನೇ ತರಗತಿಯಿಂದ 7ನೇ ತರಗತಿಯ ವರೆಗಿನ ಮಕ್ಕಳಿಗೂ ಟಿವಿಯಲ್ಲಿ ಬೋಧನೆ ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳು ತ್ತಿದೆ. ಜತೆಗೆ ಶಿಕ್ಷಕರೇ ನೇರವಾಗಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠವನ್ನು ನೀಡುವ ಅನುಸರಿಸ ಬಹುದಾಗಿದೆ. ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನರಹಿತ 1,224 ಶಾಲೆಗಳಿವೆ.
ಜಿಲ್ಲೆಯಲ್ಲಿ ಟಿವಿ, ಮೊಬೆ„ಲ್, ಇಂಟರ್‌ನೆಟ್ ವ್ಯವಸ್ಥೆ ಇರುವ ಮಕ್ಕಳ ಬಗ್ಗೆ ಮಾಹಿತಿ ಪಟ್ಟಿ ಮಾಡಲಾಗಿದೆ. ಈ ವ್ಯವಸ್ಥೆಗಳು ಇಲ್ಲದ ಮಕ್ಕಳಿಗೂ ಶಿಕ್ಷಣ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಮನೆಗೆ ತೆರಳಿ ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಕೋವಿಡ್ ನಿಯಮಾವಳಿ ಅನ್ವಯ ತರಗತಿ ತೆಗೆದುಕೊಳ್ಳುತ್ತಿದ್ದಾರೆ.
-ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ ಜಿಲ್ಲೆ.