Advertisement
ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕದ ಆಶ್ರಯದಲ್ಲಿ ಪುರಭವನದಲ್ಲಿ ಜರಗಿದ “ಕಂದಾಯ ದಿನಾಚರಣೆ-2017′ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರನ್ನು ದೇಶದ ಬೆನ್ನೆಲುಬು ಎಂದು ನಾವು ಕರೆಯುತ್ತೇವೆ. ಸರಕಾರಿ ನೌಕರರನ್ನು ಕೂಡ ಅದೇ ರೀತಿ ಕರೆಯಬೇಕಿದೆ. ಕಂದಾಯ ಇಲಾಖೆ ಸಹಿತ ಸರಕಾರದ ಎಲ್ಲ ಇಲಾಖೆಗಳ ನೌಕರರ ಭವಿಷ್ಯದ ದೃಷ್ಟಿಯಿಂದ ಅವರಿಗೆ ಮನೆ ನಿರ್ಮಾಣಕ್ಕೆ ಸಹಕಾರ ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸ ಆದರೆ ಸರಕಾರಿ ನೌಕರರು ಯಾವುದೇ ಸಮಸ್ಯೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಾರೆ. ಈ ಹಿಂದೆ ಶಾಸಕನಾಗಿದ್ದ ಸಂದರ್ಭದಲ್ಲಿ ಈ ವಿಚಾರವನ್ನು ನಾನು ಸರಕಾರದ ಗಮನಕ್ಕೆ ತಂದಿದ್ದೆ. ಈಗ ಮತ್ತೆ ಪ್ರಸ್ತಾವಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಕಂದಾಯ ಇಲಾಖೆಯ ನೌಕರರು ಜತೆಯಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಪೂರಕ. ಕಾರ್ಯದ ಒತ್ತಡದ ಮಧ್ಯೆ ನಮ್ಮೊಳಗಿರುವ ಪ್ರತಿಭೆ ಅನಾವರಣಕ್ಕೆ ಅವಕಾಶ ದೊರಕಿರುವುದು ಶ್ಲಾಘನೀಯ. ಕಂದಾಯ ಇಲಾಖೆ ಸಿಬಂದಿ ತಮ್ಮ ಸೇವಾ ಕಾರ್ಯವ್ಯಾಪ್ತಿಯಲ್ಲಿ ವಿಶಿಷ್ಟ ಹಾಗೂ ವಿಭಿನ್ನವಾಗಿ ಕಾಣುತ್ತಾರೆ. ಸರಕಾರಿ ವ್ಯವಸ್ಥೆಯ ಮಾದರಿಯಲ್ಲಿ ಕಂದಾಯ ಇಲಾಖೆ ಮೇಲೆ ಸರ್ವರೂ ಕೂಡ ಹೆಚ್ಚಿನ ನಂಬಿಕೆ ಇಟ್ಟಿದ್ದಾರೆ. ಇದನ್ನು ಕಾಪಾಡಿಕೊಂಡು ಹೋಗುವ ಕೆಲಸವಾಗಬೇಕಿದೆ ಎಂದರು. ಉಡುಪಿ ಜಿ.ಪಂ. ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಇಲಾಖೆಯ ಹಿರಿಯ ನೌಕರರನ್ನು ಸಮ್ಮಾನಿಸಲಾಯಿತು.
Related Articles
Advertisement