Advertisement
ಈ ವಿಚಾರವಾಗಿ ದರ್ಶನ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಈ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿದೆ.
ಮನವಿ ಸಲ್ಲಿಸಿಕೊಳ್ಳಿ ಎಂದು ಹೈಕೋರ್ಟ್ ಹೇಳಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಹೊಸ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.